ಮುರ್ಷಿದಾಬಾದ್​:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಪತ್ನಿ ಮೆಲಾನಿಯಾ ಟ್ರಂಪ್​ ಅವರು ದೆಹಲಿ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಲಿರುವ ಕಾರ್ಯಕ್ರಮಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​, ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಕೇಂದ್ರ ಸರ್ಕಾರ ಆಮಂತ್ರಣ ಕೊಟ್ಟಿಲ್ಲದ ಕಾರಣಕ್ಕೆ ಈಗಾಗಲೇ ಆಪ್​ ಆಕ್ಷೇಪ ವ್ಯಕ್ತಪಡಿಸಿದೆ.
ಹೀಗಿರುವಾಗ ಕಾಂಗ್ರೆಸ್ ಕೂಡ ಇದೇ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಲೋಕಸಭಾ ಪ್ರತಿಪಕ್ಷ ನಾಯಕ ಅಧೀರ್​ ರಂಜನ್​ ಚೌಧರಿ ಮಾಧ್ಯಮಗಳೊಂದಿಗೆ ಮಾತನಾಡಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗಾಗಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಔತಣಕೂಟದಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ. ಯಾಕೆಂದರೆ ಟ್ರಂಪ್​ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರಿಗೆ ಆಮಂತ್ರಣ ನೀಡಿಲ್ಲ ಎಂದು ಹೇಳಿದ್ದಾರೆ.
ಟ್ರಂಪ್​ ಅವರು ಭಾರತಕ್ಕೆ ಬರುತ್ತಿದ್ದಾರೆ. ಅವರಿಗಾಗಿ ಅದ್ದೂರಿಯಾಗಿ ಔತಣಕೂಟ ಆಯೋಜಿಸಲಾಗುತ್ತಿದೆ. ಆದರೆ ಇದಕ್ಕೆ ಪ್ರತಿಪಕ್ಷಕ್ಕೆ ಆಹ್ವಾನ ನೀಡಿಲ್ಲ. ಸೋನಿಯಾ ಗಾಂಧಿಯವರಿಗೆ ಯಾಕೆ ಈ ಔತಣಕೂಟಕ್ಕೆ ಆಮಂತ್ರಣ ನೀಡಿಲ್ಲ. ಅಮೆರಿಕದಲ್ಲಿ ನಡೆದ ಹೌಡಿ ಮೋದಿಯಲ್ಲಿ ಅಲ್ಲಿನ ರಿಪಬ್ಲಿಕ್​ ಮತ್ತು ಡೆಮೋಕ್ರಟಿಕ್​ ಪಕ್ಷದವರು ವೇದಿಕೆಯಲ್ಲಿ ಇದ್ದರು. ಆದರೆ ನಮಸ್ತೆ ಟ್ರಂಪ್​ನಲ್ಲಿ ಮೋದಿ ಮತ್ತವರ ಪಕ್ಷದವರು ಮಾತ್ರ ಅವರೊಂದಿಗೆ ಇರಬೇಕು. ಇದೆಂತಹ ಪ್ರಜಾಪ್ರಭುತ್ವ ಎಂದು ಪ್ರಶ್ನಿಸಿದ್ದಾರೆ.
ಟ್ರಂಪ್​ ಭಾರತಕ್ಕೆ ಬರುತ್ತಿರುವುದೇ ದೊಡ್ಡ ವಿಷಯ. ಅಮೆರಿಕ ಬಲಾಢ್ಯ ರಾಷ್ಟ್ರ. ಅದರ ಅಧ್ಯಕ್ಷರು ನಮ್ಮ ದೇಶಕ್ಕೆ ಬರುತ್ತಿದ್ದಾರೆ. ಅಮೆರಿಕ ಪ್ರಜಾಪ್ರಭುತ್ವ ಅತ್ಯಂತ ಹಳೆಯದು. ಹಾಗೇ ಭಾರತ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹೇಳಿದರು.ಟ್ರಂಪ್​ ಆಗಮನದ ನಿಮಿತ್ತ ಕೋಟ್ಯಂತರ ರೂಪಾಯಿಯನ್ನು ಖರ್ಚು ಮಾಡುತ್ತಿರುವ ಬಗ್ಗೆ ಕೂಡ ಅಧೀರ್​ ರಂಜನ್​ ಚೌಧರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಷ್ಟೆಲ್ಲ ಹಣ ಖರ್ಚು ಮಾಡುವ ಅವಶ್ಯಕತೆಯಾದರೂ ಏನಿದೆ. ಸ್ಲಮ್​ಗಳನ್ನು ಮುಚ್ಚಿಡಲು ಯತ್ನಿಸಲಾಗುತ್ತಿದೆ. ಇದನ್ನೆಲ್ಲ ಟ್ರಂಪ್​ ಸಂತೋಷಕ್ಕಾಗಿ ಮಾಡಲಾಗುತ್ತಿದೆಯಾ? ಮೋದಿ ಸರ್ಕಾರದ ಈ ನಡೆ ಸರಿಯಿಲ್ಲ. ನಾವೆಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದರು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 5 =
Remember me
