ಬೀಜಿಂಗ್​:ಲಡಾಖ್​ ಬಿಕ್ಕಟ್ಟಿನ ವಿಷಯದಲ್ಲಿ ಭಾರತದ ಘನತೆಗೆ ಧಕ್ಕೆಯನ್ನುಂಟು ಮಾಡುವುದಿಲ್ಲ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯಾನ್​ ಹೇಳಿದ್ದಾರೆ.
ಬಿಕ್ಕಟ್ಟು ಉಂಟಾಗಿರುವ ಲಡಾಖ್​ನ ವಾಸ್ತವ ಗಡಿರೇಖೆಯ ಬಳಿ ಪರಿಸ್ಥಿತಿ ಸ್ಥಿರವಾಗಿದ್ದು ನಿಯಂತ್ರಣದಲ್ಲಿದೆ ಎಂದು ಪುನರುಚ್ಚರಿಸಿದ ಅವರು, ಬಿಕ್ಕಟ್ಟ ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳು ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆಯನ್ನು ಮುಂದುವರಿಸಿವೆ ಎಂದರು. ಅಲ್ಲದೆ ಶೀಘ್ರದಲ್ಲೇ ಬಿಕ್ಕಟ್ಟು ಶಮನವಾಗುವ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬೆತ್ತಲೆಯಾಗಿರುವ ಫೋಟೋವನ್ನು ಪೋಸ್ಟ್​ ಮಾಡಿ, ಟ್ರೋಲ್​ ಆದ ಕ್ರಿಕೆಟರ್​ ಮೊಹಮ್ಮದ್​ ಶಮಿ ಪತ್ನಿ…
ಲಡಾಖ್​ ಬಿಕ್ಕಟ್ಟಿನ ವಿಷಯದಲ್ಲಿ ಭಾರತದ ಘನತೆಯೊಂದಿಗೆ ರಾಜೀ ಮಾಡಿಕೊಳ್ಳುವ ಮಾತೇ ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೋಮವಾರ ಹೇಳಿದ್ದರು. ಇದರ ಬೆನ್ನಲ್ಲೇ ಚೀನಾದ ಈ ಪ್ರತಿಕ್ರಿಯೆ ಬಂದಿದೆ.
ವಾಸ್ತವ ಗಡಿ ರೇಖೆ ಬಳಿಯ ಗಲ್ವಾನ್​ ಕಣಿವೆಯ ಮೂರು ಕಡೆ ಮತ್ತು ಪ್ಯಾಂಗಾಂಗ್​ ತ್ಸೊ ಸರೋವರದ ಬಳಿ ಚೀನಾ 6 ಸಾವಿರಕ್ಕೂ ಹೆಚ್ಚು ಯೋಧರನ್ನು ನಿಯೋಜಿಸಿದೆ. ಅಲ್ಲದೆ, ಭಾರಿ ಪ್ರಮಾಣದ ಯುದ್ಧೋಪಕರಣಗಳನ್ನು ವಾಸ್ತವ ಗಡಿರೇಖೆ ಬಳಿ ಜಮಾವಣೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಭಾರತ ಕೂಡ ಹೆಚ್ಚಿನ ಸಂಖ್ಯೆಯ ಯೋಧರನ್ನು ಸ್ಥಳದಲ್ಲಿ ನಿಯೋಜಿಸಿದೆ.
ವರ್ಚುಯಲ್​ ಆಗಿ ನಡೆಯುತ್ತಾ ಸಂಸತ್​ನ ಮುಂಗಾರು ಅಧಿವೇಶನ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fourteen =
Remember me
