ನವದೆಹಲಿ:ಕರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲಾ- ಕಾಲೇಜುಗಳನ್ನು ಪುನಾರಂಭಿಸುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಕರೊನಾ ಸೋಂಕು ವ್ಯಾಪಿಸುವುದನ್ನು ಸಂಪೂರ್ಣವಾಗಿ ತಡೆಗಟ್ಟಲಾಗಿದೆ ಎಂಬುದು ಮನವರಿಕೆಯಾಗುವವರೆಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ;ಎರಡೇ ವಾರದಲ್ಲಿ 97 ಸಾವಿರ ಮಕ್ಕಳಲ್ಲಿ ಸೋಂಕು; ಶಾಲೆಗಳ ಮರು ಆರಂಭ ನಿರ್ಧಾರ ಹುಟ್ಟು ಹಾಕಿದೆ ಭಾರಿ ಚರ್ಚೆ
ದೆಹಲಿಯಲ್ಲಿ ಎರಡು ತಿಂಗಳ ಹಿಂದೆ ಇದ್ದ ಪರಿಸ್ಥಿತಿಗೆ ಹೋಲಿಸಿದಲ್ಲಿ ಈಗ ಸುಧಾರಿಸಿದೆ. ಇದಕ್ಕೆ ಕಾರಣವಾದ ಕೇಂದ್ರ ಸರ್ಕಾರವೂ ಸೇರಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುವುದಾಗಿ ಅವರು ಹೇಳಿದ್ದಾರೆ. ಕರೊನಾ ವಾರಿಯರ್ಸ್​, ವಿವಿಧ ಸಂಘ-ಸಂಸ್ಥೆಗಳು ಕೂಡ ಇದಕ್ಕೆ ಶ್ರಮ ವಹಿಸಿವೆ ಎಂದು ತಿಳಿಸಿದ್ದಾರೆ.
ಹಲವು ಕ್ಷೇತ್ರಗಳ ಗಣ್ಯರು, ಸಾರ್ವಜನಿಕರು ಕೂಡ ಶಾಲೆಗಳನ್ನು ತೆರೆಯುವುದು ಬೇಡ ಎಂದೇ ಹೇಳಿದ್ದಾರೆ. ಜತೆಗೆ, ಮೆಸೇಜ್​ಗಳನ್ನು ಮಾಡುತ್ತಿದ್ದಾರೆ. ಕರೊನಾ ಸಂಕಷ್ಟ ಮುಗಿಯುವವರೆಗೆ ಶಾಲೆಗಳನ್ನು ತೆರೆಯುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ;ಭಾರತೀಯರಿಗೆ ಶುಭಸುದ್ದಿ; ದೇಶೀಯ ಕರೊನಾ ಲಸಿಕೆ ಕೊವಾಕ್ಸಿನ್​ ಮಾನವರ ಬಳಕೆಗೆ ಸುರಕ್ಷಿತ; ಆರಂಭಿಕ ಯಶಸ್ಸು
ಮಕ್ಕಳ ಬಗ್ಗೆ ಪಾಲಕರು ಎಷ್ಟು ಕಾಳಜಿ ಹೊಂದಿದ್ದಾರೋ ಅಷ್ಟೇ ಕಾಳಜಿಯನ್ನು ಸರ್ಕಾರ ಕೂಡ ಹೊಂದಿದೆ. ಹೀಗಾಘಿ ಪೂಣ್ ಮನವರಿಕೆಯಾಗುವವರೆಗೆ ಶಾಲೆಗಳನ್ನು ತೆರಯಲ್ಲ ಎಂದಿದ್ದಾರೆ.
ಕೇಂದ್ರ ಸರ್ಕಾರವೇ ವಿತರಿಸಲಿದೆ ಕರೊನಾ ಲಸಿಕೆ; ಸಾರ್ವಜನಿಕರಿಗೆ ಬೇಕಿಲ್ಲ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 2 =
Remember me
