ನವದೆಹಲಿ:ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಕುಸದತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಹಲವು ದಿನಗಳಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಜೂನ್​ 7ರಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಅವರ ಜೊತೆ ಸಭೆ ನಡೆಸಿದ ಬಳಿಕ ಕುಸ್ತಿಪಟುಗಳು ಸರ್ಕಾರ ಕಾಲಾವಕಾಶ ಕೇಳಿದ ಕಾರಣ, ಜೂನ್​ 15ರವರೆಗೆ ಪ್ರತಿಭಟನೆ ಮಾಡುವುದಿಲ್ಲ ಎಂದು ಕ್ರೀಡಾಪಟುಗಳು ತಿಳಿಸಿದ್ದರು.
#WATCH| “We will participate in Asian Games only when all these issues will be resolved. You can’t understand what we’re going through mentally each day”: Wrestler Sakshee Malikkh in Sonipatpic.twitter.com/yozpRnYQG9— ANI (@ANI)June 10, 2023

#WATCH| “We will participate in Asian Games only when all these issues will be resolved. You can’t understand what we’re going through mentally each day”: Wrestler Sakshee Malikkh in Sonipatpic.twitter.com/yozpRnYQG9
ಇದನ್ನೂ ಓದಿ:ಸರ್ಕಾರ ಕಾಲಾವಕಾಶ ಕೇಳಿದೆ, ಜೂನ್​ 15ರವರೆಗೆ ಪ್ರತಿಭಟನೆ ಮಾಡುವುದಿಲ್ಲ: ಕುಸ್ತಿಪಟುಗಳು
ಈ ನಡುವೆ ಪ್ರತಿಭಟನಾ ನಿರತ ಕುಸ್ತಿಪಟು ಸಾಕ್ಷಿ ಮಲಿಕ್​ ಮುಂಬರುವ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕಿದರೆ ಮಾತ್ರ ನಾವು ಕ್ರೀಡಾಕೂಟದಲ್ಲಿ ಭಾಗವಹಿಸುತ್ತೇವೆ.
ನಾವು ಮಾನಸಿಕವಾಗಿ ಯಾವ ರೀತಿಯ ಯಾತನೆಯನ್ನು ಅನುಭವಿಸುತ್ತಿದ್ದೇವೆ ಎಂಬುದು ಯಾರಿಂದಲೂ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಏಷ್ಯನ್​ ಗೇಮ್ಸ್​ ಕ್ರೀಡಾಕೂಟದಲ್ಲಿ ಭಾಗವಹಿಸುವ ಕುರಿತು ಕುಸ್ತಿಪಟು ಸಾಕ್ಷಿ ಮಲಿಕ್​ ಪ್ರತಿಕ್ರಿಯಿಸಿದ್ದಾರೆ.
ಈ ನಡುವೆ ಪ್ರತಿಭಟನಾ ನಿರತರ ನಡುವೆ ವೈಮನಸ್ಸು ಉಂಟಾಗಿದೆ ಎಂಬುದರ ಕುರಿತು ಪ್ರತಿಕ್ರಿಯಿಸಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ನಾವೆಲ್ಲ ಒಟ್ಟಾಗಿದ್ದೇವೆ ಎಂದು ಸಾಕ್ಷಿ ಮಲಿಕ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
