ಮುಂಬೈ:ಬಿಲಿಯನೇರ್ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಉದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ವಿವಾಹವಾಗಲಿರುವ ವಿಚಾರ ಎಲ್ಲರಿಗೂ ಗೊತ್ತೆ ಇದೆ. ವಿವಾಹದ ಅದ್ಧೂರಿ ಆಚರಣೆಗಳು ಆರಂಭವಾದಾಗಿನಿಂದ ಸಾಮಾಜಿಕ ಜಾಲತಾಣದಲ್ಲಿ ಸಖತ್​​ ಹೈಲೈಟ್​​ ಆಗಿದೆ. ಸಮಾರಂಭದ ಫೋಟೋ ಮತ್ತು ವೀಡಿಯೊಗಳು ಜಾಲತಾಣದಲ್ಲಿ ಹರಿದಾಡುತ್ತಿದ್ದು ವೈರಲ್​ ಆಗಿವೆ.
ಇದನ್ನು ಓದಿ:ಜೂನ್​​​ 25ರಂದು ಸಂವಿಧಾನ ಹತ್ಯೆ ದಿನ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ
ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ಈ ವಿವಾಹ ಸಮಾರಂಭ ಅದ್ಧೂರಿ ಆಚರಣೆ ಮತ್ತು ಉನ್ನತ ವಿಐಪಿ ಅತಿಥಿ ಪಟ್ಟಿಯಿಂದಾಗಿ ಈಗಾಗಲೇ ಸುದ್ದಿಯಲ್ಲಿದೆ. ಈ ಹೈಪ್ರೊಫೈಲ್ ಮದುವೆಗೆ ದೇಶ ವಿದೇಶಗಳಿಂದ ಅನೇಕ ಅತಿಥಿಗಳು ಆಗಮಿಸುತ್ತಿದ್ದಾರೆ. ಅಮೆರಿಕದ ರಿಯಾಲಿಟಿ ಶೋ ತಾರೆ ಕಿಮ್ ಕಾರ್ಡಶಿಯಾನ್, ಮಾಜಿ ಬಾಕ್ಸಿಂಗ್ ಹೆವಿವೇಯ್ಟ್ ಚಾಂಪಿಯನ್ ಮೈಕ್ ಟೈಸನ್ ಹಾಗೂ ಬ್ರಿಟನ್‌ನ ಮಾಜಿ ಪ್ರಧಾನಿ ಟೋನಿ ಬ್ಲೇರ್ ಮತ್ತುಬೋರಿಸ್ ಜಾನ್ಸನ್ ಅವರ ಹೆಸರುಗಳನ್ನು ಈ ಪಟ್ಟಿಯಲ್ಲಿ ನಿರೀಕ್ಷಿಸಲಾಗಿದೆ.
ಇನ್ನೂ ಭಾರತೀಯ ಸಿನಿಮಾ ರಂಗದ ಸೆಲಬ್ರಿಟಿಗಳು ಈ ಮದುವೆಯಲ್ಲಿ ಭಾಗಿಯಾಗುವ ಬಗ್ಗೆ ಒಂದೊಂದೆ ಮಾಹಿತಿ ಹೊರಬರುತ್ತಿದೆ. ರಾಜಕೀಯ ವಲಯದಿಂದ ವಿವಾಹದಲ್ಲಿ ರಕ್ಷಣಾ ಸಚಿವ ರಾಜನಾಥ್​​ ಸಿಂಗ್​ ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ ಮದುವೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಕೂಡ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಮೋದಿ ದಂಪತಿಯನ್ನು ಆಶೀರ್ವದಿಸಿ ತೆರಳಲಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಆದರೆ ಈ ವಿಚಾರ ಪ್ರಧಾನಿ ಕಚೇರಿಯಿಂದ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.
ಅಷ್ಟಕ್ಕೂ ಪ್ರಧಾನಿ ಮೋದಿ ಅವರು ಮುಖೇಶ್ ಅಂಬಾನಿ ಕಿರಿಯ ಪುತ್ರನ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಸುದ್ದಿ ಹರಡಲು ಕಾರಣವಾಗಿದ್ದು ಆ ಪೋಸ್ಟರ್​​. ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ನಡೆಯುವ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್‌ನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ಗೆ ಹೋಗುವ ರಸ್ತೆಯಲ್ಲಿ ಮೋದಿ ಅವರ ಪೋಸ್ಟರ್​ಗಳು ಎಲ್ಲರ ಗಮನ ಸೆಳೆದಿವೆ. ಪ್ರಧಾನಿ ಮೋದಿ ಅವರ ನೇತೃತ್ವದ ಪೋಸ್ಟರ್​ಗಳನ್ನು ಬಿಜೆಪಿಯವರೇ ಹಾಕಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಹಾಕಲಾದ ಈ ಪೋಸ್ಟರ್‌ಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಂಬೈಗೆ ಹೃತ್ಪೂರ್ವಕ ಸ್ವಾಗತ ಎಂದು ಬರೆಯಲಾಗಿದೆ. (ಏಜೆನ್ಸೀಸ್​​)
ಶಂಭು ಗಡಿ ಸಂಚಾರಮುಕ್ತಗೊಳಿಸಿ; ಸರ್ಕಾರಕ್ಕೆ ಸುಪ್ರೀಂ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 2 =
Remember me
