ನವದೆಹಲಿ:ಪ್ರಧಾನಿ ಮೋದಿ ಅವರು ಮುಂದಿನ ತಿಂಗಳು ಆಗಸ್ಟ್ 24ರಂದು ಕೈವ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ರಷ್ಯಾ-ಯೂಕ್ರೇನ್​​ ಯುದ್ಧ ಆರಂಭವಾದ ನಂತರ ಮೊದಲ ಬಾರಿಗೆ ಯೂಕ್ರೇನಿಯನ್ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಅವರು ಕೈವ್​​ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ:ಆಗಸ್ಟ್​ನಲ್ಲಿ ಯೂಕ್ರೇನ್​​ಗೆ ಪ್ರಧಾನಿ ಮೋದಿ ಭೇಟಿ?; ರಾಷ್ಟ್ರೀಯ ದಿನದಂದೇ ಕೈವ್​ಗೆ ‘ನಮೋ’ ವಿಸಿಟ್
ಐರೋಪ್ಯ ರಾಷ್ಟ್ರವಾದ ಯೂಕ್ರೇನ್‌ಗೆ ಭೇಟಿ ನೀಡುವ ಮೊದಲು ಅಥವಾ ನಂತರ ಜನಾಂಗೀಯ ಸಂಘರ್ಷ ಪೀಡಿತ ಮಣಿಪುರಕ್ಕೆ ಪ್ರಧಾನಿ ಭೇಟಿ ನೀಡುತ್ತಾರೆಯೇ ಎಂದು ಕಾಂಗ್ರೆಸ್​ ಹಿರಿಯ ನಾಯಕ ಜೈರಾಮ್ ರಮೇಶ್ ಭಾನುವಾರ(ಜುಲೈ 28) ಪ್ರಶ್ನಿಸಿದ್ದಾರೆ.
ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್​ ಅವರು, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದಾರೆ. ಮತ್ತು ಬಿಜೆಪಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಧಾನಿ ಮೋದಿ ಅವರನ್ನು ನೇರವಾಗಿ ಭೇಟಿಯಾಗಿದ್ದಾರೆಯೇ ಎಂದು ಕೇಳಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಣಿಪುರದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆಯೇ? ಯೂಕ್ರೇನ್​​​ ಭೇಟಿ ಮೊದಲು ಅಥವಾ ನಂತರ ಮಣಿಪುರಕ್ಕೆ ಭೇಟಿ ನೀಡುವಂತೆ ನರೇಂದ್ರ ಮೋದಿ ಅವರನ್ನು ಸಿಎಂ ಬಿರೇನ್ ಸಿಂಗ್ ಆಹ್ವಾನಿಸಿದ್ದಾರೆಯೇ ಎಂದು ಹೇಳಿದ್ದಾರೆ.
The Chief Minister of Manipur attends the NITI Aayog meeting in New Delhi presided over by the self-anointed non-biological PM.Then the Manipur CM attends a meeting of BJP CMs and Deputy CMs presided over by the same deity.The simple question that the people of Manipur are…
ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಸಂಘರ್ಷದಿಂದಾಗಿ ರಾಜ್ಯದಲ್ಲಿ ಗಂಭೀರ ಸ್ಥಿತಿ ಉಂಟಾಗಿದೆ. ಪ್ರಧಾನಿ ಮೋದಿಯವರ ನೇತೃತ್ವದ ಬಿಜೆಪಿಯೇ ಮಣಿಪುರದಲ್ಲಿ ಅಧಿಕಾರದಲ್ಲಿದೆ. ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿಲ್ಲ ಎಂದು ಕಾಂಗ್ರೆಸ್​ ಪದೇಪದೆ ಟೀಕಿಸುತ್ತಿದೆ. (ಏಜೆನ್ಸೀಸ್​​)
ಅಯೋಧ್ಯೆ ಬಾಲರಾಮನಿರುವ ವಿಶ್ವದ ಮೊದಲ ಅಂಚೆಚೀಟಿ ಬಿಡುಗಡೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + fourteen =
Remember me
