ಮುಂಬೈ:ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಾಲ್ಕನೇ ಹಂತದ ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲೇ ಕಾಂಗ್ರೆಸ್​ ನಾಯಕರು ಒಂದಿಲ್ಲೊಂದು ಹೇಳಿಕೆಗಳನ್ನು ಕೊಡುವ ಮೂಲಕ ಪೇಚಿಗೆ ಸಿಲುಕುತ್ತಿದ್ದಾರೆ. ಇದೀಗ ಮಹಾರಾಷ್ಟ್ರ ಕಾಂಗ್ರೆಸ್​ ಘಟಕದ ಅಧ್ಯಕ್ಷ ರಾಮಮಂದಿರವನ್ನು ಶುದ್ದಿ ಮಾಡುವುದಾಗಿ ಹೇಳುವ ಮೂಲಕ ಸುದ್ದಿಯಾಗಿದ್ದಾರೆ.
ಈ ಕುರಿತು ಮಾತನಾಡಿದ ನಾನಾ ಪಟೋಲೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೇರಿದರೆ, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಶುದ್ಧೀಕರಿಸಲಾಗುವುದು. ಅಲ್ಲಿರುವುದು ಶ್ರೀ ರಾಮನ ಮೂರ್ತಿಯಲ್ಲ. ಬಾಲ ರಾಮ ಮೂರ್ತಿ. ಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿಷ್ಟಾಚಾರಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
कांग्रेस सरकार आएगी तो शुद्धिकरण कर दोबारा बनेगा राम मंदिर।-महाराष्ट्र कांग्रेस के प्रदेश अध्यक्ष नाना पटोलेअगर शुद्धिकरण करना है तो अपने दिमाग का करिए नाना पटोले,जिस राम का नाम लेने से हमारे जन्म-जन्मांतर के पाप कट जाते हैं,उस प्रभु श्रीराम का मंदिर अशुद्ध है?#NanaPatolepic.twitter.com/ZC1FCT53s4
ಇದನ್ನೂ ಓದಿ:ಈ ಐದು ಕಂಡೀಷನ್​ಗಳಲ್ಲಿ ಪಾಸ್​ ಆದರೆ ಆರ್​ಸಿಬಿ ಪ್ಲೇಆಫ್​ ಪ್ರವೇಶಿಸುವುದು ಕನ್ಫರ್ಮ್​!
ಮಂದಿರ ನಿರ್ಮಾಣ ವಿಚಾರದಲ್ಲಿ ಆಗಿರುವ ಶಿಷ್ಟಾಚಾರ ಉಲ್ಲಂಘನೆಯನ್ನು ನಾಲ್ವರು ಶಂಕರಾಚಾರ್ಯರಿಂದ ಶುದ್ಧೀಕರಿಸಲಿದ್ದಾರೆ. ದರ್ಬಾರ್​ ರಾಮನ ಮೂರ್ತಿ ಪ್ರತಿಷ್ಠಾಪಿಸುತ್ತೇವೆ ಎಂದು ನಾನಾ ಪಟೋಲೆ ಹೇಳಿದ್ದಾರೆ. ಇತ್ತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ.
ನಾನಾ ಪಟೋಲೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ, ಸಂಸದ ಸುಧಾಂಶು ತ್ರಿವೇದಿ, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಶ್ರೀರಾಮ ಮಂದಿರದ ಬಗ್ಗೆ ಅತ್ಯಂತ ಆಕ್ಷೇಪಾರ್ಹ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ರಾಮಜನ್ಮಭೂಮಿಯನ್ನು ಶುದ್ಧೀಕರಿಸುವ ಅಗತ್ಯವಿದೆ ಎಂದು ಹೇಳುವ ಮೂಲಕ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
#WATCH| BJP MP and party's national spokesperson Sudhanshu Trivedi says, "…Maharashtra Congress president Nana Patole has given a very objectionable and controversial statement regarding Shri Ram temple… He has said that Shri Ramjanmbhoomi needs to be purified. The important…pic.twitter.com/3oTWgqYKIc
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 5 =
Remember me
