ನವದೆಹಲಿ:ಕರೊನಾ ವೈರಸ್​ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು ಬಳಿಕ ಮಾಡಿದ ಟ್ವೀಟ್​ ಕುತೂಹಲ ಹುಟ್ಟಿಸಿದೆ.
ಮಾ.24ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು ಅಂದು ರಾತ್ರಿ 12 ಗಂಟೆಯಿಂದಲೇ ಭಾರತ ಲಾಕ್​ಡೌನ್​ ಆಗಲಿದೆ ಎಂದು ಘೋಷಿಸಿದ್ದರು. ಹಾಗೇ ಮೊನ್ನೆ ಮನ್​ ಕೀ ಬಾತ್​​ನಲ್ಲಿ ಮಾತನಾಡಿ, ಕರೊನಾ ವೈರಸ್​ ಬಗ್ಗೆ ಅರಿವು ಮೂಡಿಸಿದ್ದರು.
ಅದರ ಹೊರತಾಗಿಯೂ ಸಾಮಾಜಿಕ ಜಾಲತಾಣಗಳ ಮೂಲಕ ದೇಶದ ಜನರೊಂದಿಗೆ ಸಂವಹನ ನಡೆಸುತ್ತಲೇ ಇದ್ದಾರೆ. ಕರೊನಾ ಗಂಭೀರತೆ ಅರ್ಥ ಮಾಡಿಕೊಳ್ಳಿ, ಆರೋಗ್ಯ ಕಾಪಾಡಿಕೊಳ್ಳಿ ಎಂದು ಸಂದೇಶ ನೀಡುತ್ತಲೇ ಇದ್ದಾರೆ.
ಹಾಗೇ ಇಂದು ಕೂಡ ಒಂದು ಟ್ವೀಟ್​ ಮಾಡಿದ್ದಾರೆ. ನಾಳೆ (ಏಪ್ರಿಲ್​3) ಬೆಳಗ್ಗೆ 9ಗಂಟೆಗೆ ನಾನು ದೇಶದ ಜನರಿಗೆ ವಿಡಿಯೋ ಸಂದೇಶವೊಂದನ್ನು ನೀಡುತ್ತೇನೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಕರೊನಾ ವೈರಸ್​ ಪ್ರಮಾಣದ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. 1965 ಸೋಂಕಿತರು ಇದ್ದು, 50 ಮಂದಿ ಮೃತಪಟ್ಟಿದ್ದಾರೆ.
ಲಾಕ್​ಡೌನ್​ ಇದ್ದರೂ ಜನರ ಓಡಾಟ ಸಂಪೂರ್ಣ ಬಂದ್​ ಆಗಿಲ್ಲ. ಹಾಗಾಗಿ ಮೋದಿಯವರು ವಿಡಿಯೋ ಸಂದೇಶದಲ್ಲಿ ಏನು ಹೇಳಬಹುದು ಎಂಬ ಕುತೂಹಲ ಸೃಷ್ಟಿಯಾಗಿದೆ. (ಏಜೆನ್ಸೀಸ್​)
At 9 AM tomorrow morning, I’ll share a small video message with my fellow Indians.
कल सुबह 9 बजे देशवासियों के साथ मैं एक वीडियो संदेश साझा करूंगा।
— Narendra Modi (@narendramodi)April 2, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + twenty =
Remember me
