ನವದೆಹಲಿ:ಇತ್ತೀಚಿಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಬಹುಮತ ಸಾಧಿಸಿದ್ದು, ಇಂದು (ಜೂನ್ 09) ಸಂಜೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇನ್ನೂ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿರುವುದನ್ನು ಟೀಕಿಸಿರುವ ಕಾಂಗ್ರೆಸ್​ ಸಂಸದ ಶಶಿ ತರೂರ್​ ಪದಗ್ರಹಣ ಸಮಾರಂಭದ ಬದಲು ಭಾರತ-ಪಾಕಿಸ್ತಾನ ಕ್ರಿಕೆಟ್​ ಮ್ಯಾಚ್​ ನೋಡುವುದಾಗಿ ಹೇಳಿದ್ದಾರೆ.
ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಸಂಸದ ಶಶಿ ತರೂರ್​, ನನ್ನನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿಲ್ಲ. ಹೀಗಾಗಿ ನಾನು ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್​ ಪಂದ್ಯವನ್ನು ವೀಕ್ಷಿಸುತ್ತೇನೆ. ಪ್ರಧಾನಿ ಪ್ರಮಾಣವಚನ ಸಮಾರಂಭಕ್ಕೆ ಬೇರೆ ರಾಷ್ಟ್ರದ ನಾಯಕರನ್ನು ಆಹ್ವಾನಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.
#WATCH| On leaders of foreign countries invited for the swearing-in ceremony of PM-designate Narendra Modi, Congress leader Shashi Tharoor says, "I think that's a good tradition of inviting the neighbouring countries. But this time there's one less. He has not invited Pakistan.…pic.twitter.com/ztCTVprpX6
ಇದನ್ನೂ ಓದಿ:ಆಂಗ್ಲರ ವಿರುದ್ಧ ಆಲ್ರೌಂಡ್​ ಪ್ರದರ್ಶನ; ಹಾಲಿ ಚಾಂಪಿಯನ್ನರ ಎದುರು ಗೆದ್ದು ಬೀಗಿದ ಆಸ್ಟ್ರೇಲಿಯಾ
ಮಾಲ್ಡೀವ್ಸ್​ ಹಾಗೂ ಭಾರತದ ಸಂಬಂಧ ಹದಗೆಟ್ಟಿದ್ದರು ಅಲ್ಲಿನ ಪ್ರಧಾನಿಗೆ ಆಹ್ವಾನ ನೀಡಿರುವುದು ಉತ್ತಮ ನಡೆಯಾಗಿದೆ. ಪ್ರಮಾಣವಚನದ ಬಳಿಕ ಮಾಲ್ಡೀವ್ಸ್​ ಅಧ್ಯಕ್ಷ ಹಾಗೂ ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ ಎನ್ನುವ ವಿಶ್ವಾಸ ನಮಗಿದೆ. ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ವಿದೇಶಾಂಗ ನೀತಿಗಳು ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳನ್ನು ಹೊಂದಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸಂಸತ್​ನಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಇತ್ತ ಕಾಂಗ್ರೆಸ್​ ಸಂಸದ ಶಶಿ ತರೂರ್​ ಹೇಳಿಕೆ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದಾರೆ. ಹಲವರು ಪಂದ್ಯ ಶುರುವಾಗುವುದು 8 ಗಂಟೆಗೆ ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಇರುವುದು 7:15ಕ್ಕೆ ನಿಮ್ಮಗಾಗಿ ಪಂದ್ಯವನ್ನು ಬೇಗ ಶುರು ಮಾಡುವುದಿಲ್ಲ ಎಂದು ಹಲವರು ಹೇಳಿಕೆಯನ್ನು ಟೀಕಿಸಿ ಕಮೆಂಟ್​ ಮಾಡುತ್ತಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 15 =
Remember me
