ಬೆಂಗಳೂರು:ಐಟಿ ಕ್ಷೇತ್ರದ ದಿಗ್ಗಜ ಕಂಪನಿಗಳಲ್ಲಿ ಒಂದಾಗಿರುವ ವಿಪ್ರೊ 300 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ. ಈ ಕುರಿತು ಕಂಪನಿಯ ಚೇರ್ಮನ್ ರಿಷದ್ ಪ್ರೇಮ್​ಜಿ ಬುಧವಾರ ಮಾಹಿತಿ ಹೊರಗೆಡಹಿದ್ದಾರೆ.
ಆಲ್​ ಇಂಡಿಯಾ ಮ್ಯಾನೇಜ್​ಮೆಂಟ್ ಅಸೋಸಿಯೇಷನ್​ (ಎಐಎಂಎ) ಹಮ್ಮಿಕೊಂಡಿದ್ದ ನ್ಯಾಷನಲ್​ ಮ್ಯಾನೇಜ್​ಮೆಂಟ್​ ಕನ್ವೆನ್ಷನ್​ನಲ್ಲಿ ಮಾತನಾಡಿದ ರಿಷದ್ ಪ್ರೇಮ್​ಜಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ‘ಮೂನ್​ಲೈಟ್​​’ನಲ್ಲಿ ತೊಡಗಿದ್ದ ಆರೋಪದ ಮೇಲೆ ಈ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.
ಕೆಲವು ಉದ್ಯೋಗಿಗಳು ನಮ್ಮ ಪ್ರತಿಸ್ಪರ್ಧಿ ಕಂಪನಿಯಲ್ಲಿ ನೇರವಾಗಿ ಕೆಲಸ ಮಾಡುತ್ತಿದ್ದುದು ಗಮನಕ್ಕೆ ಬಂದಿದೆ. ಕಳೆದ ಕೆಲವು ತಿಂಗಳಿನಿಂದ ಅಂಥ 300 ಉದ್ಯೋಗಿಗಳನ್ನು ಪತ್ತೆ ಮಾಡಲಾಗಿದ್ದು, ಅವರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂಬುದಾಗಿ ಅವರು ತಿಳಿಸಿದ್ದಾರೆ. ಒಂದು ಸಂಸ್ಥೆಯಲ್ಲಿ ನಿಯಮಿತವಾಗಿ ಕೆಲಸ ಮಾಡುತ್ತ ಇನ್ನೊಂದು ಸಂಸ್ಥೆಯಲ್ಲೂ ಕೆಲಸ ಮಾಡುವುದು ವಂಚನೆ ಎಂಬುದಾಗಿಯೂ ಅವರು ಅಭಿಪ್ರಾಯಪಟ್ಟಿದ್ದಾರೆ.
ಕರೊನಾ ಸಮಯದಲ್ಲಿ ಹೆಚ್ಚು ಪ್ರಚಲಿತದಲ್ಲಿದ್ದ ವರ್ಕ್​ ಫ್ರಂ ಹೋಮ್​ ಪದ್ಧತಿಯನ್ನು ಕೆಲವರು ದುರ್ಬಳಕೆ ಮಾಡಿಕೊಂಡಿರುವುದು ಐಟಿ ಕ್ಷೇತ್ರದಲ್ಲಿ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಬೆಳಕಿಗೆ ಬಂದಿತ್ತು. ಹೀಗೆ ಒಂದು ಸಂಸ್ಥೆಯಲ್ಲಿ ಉದ್ಯೋಗಿ ಆಗಿದ್ದುಕೊಂಡೂ ಇನ್ನೊಂದು ಕಂಪನಿಗೂ ಕೆಲಸ ಮಾಡುವುದನ್ನು ‘ಮೂನ್​ಲೈಟ್​’ ಎಂದು ಹೇಳಲಾಗುತ್ತಿದೆ.
ಉದ್ಯೋಗಿಯ ಆಕ್ರೋಶಕ್ಕೆ ಕಂಪನಿ ಮುಖ್ಯಸ್ಥನ ಸಂಸಾರವೇ ನಾಶ: 4 ಕೊಲೆ, 8 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿ

ಅಂಗಿ-ಬನಿಯನ್ ತೆಗೆಯಲು ತಕರಾರು: ದೇವಸ್ಥಾನಗಳಲ್ಲಿನ ಫಲಕ ತೆಗೆಸುವಂತೆ ಕೋರಿ ಅರ್ಜಿ

ನಿಮ್ಮೂರಿನ ಪೊಲೀಸ್​ ಠಾಣೆ ಮೇಲ್ದರ್ಜೆಗೆ?; ಇಲ್ಲಿದೆ ವಿವರ, ನೋಡಿಕೊಳ್ಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + thirteen =
Remember me
