ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಆಮ್​ ಆದ್ಮಿ ಪಕ್ಷ ಹಾಗೂ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್​ ಮೂಲಕ ಶುಭಕೋರಿರುವ ಪ್ರಧಾನಿ, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಆಪ್​ ಮತ್ತು ಅರವಿಂದ್​ ಕೇಜ್ರಿವಾಲ್​ ಅವರಿಗೆ ಅಭಿನಂದನೆಗಳು. ದೆಹಲಿ ಜನತೆಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲಿ ಎಂದು ಶುಭಕೋರುವುದಾಗಿ ತಿಳಿಸಿದ್ದಾರೆ.
ಇದಕ್ಕೆ ಟ್ವೀಟ್​ ಮೂಲಕವೇ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್​, ತುಂಬಾ ಧನ್ಯವಾದಗಳು ಸರ್. ನಮ್ಮ ರಾಜಧಾನಿ ನಗರವನ್ನು ನಿಜವಾದ ವಿಶ್ವದರ್ಜೆಯ ನಗರವನ್ನಾಗಿ ಮಾಡಲು ನಿಮ್ಮೊಂದಿಗೆ ತುಂಬಾ ಹತ್ತಿರದಿಂದ ಕಾರ್ಯನಿರ್ವಹಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಚುನಾವಣಾ ಫಲಿತಾಂಶಕ್ಕೆ ಬರುವುದಾರೆ, ಒಟ್ಟು 70 ಸ್ಥಾನಗಳಲ್ಲಿ ಈಗಾಗಲೇ 48 ಸ್ಥಾನಗಳಲ್ಲಿ ಗೆಲವು ಸಾಧಿಸಿರುವ ಆಪ್​ ಉಳಿದ 14 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ 6 ಸ್ಥಾನಗಳಲ್ಲಿ ವಿಜಯೋತ್ಸವ ಆಚರಿಸಿದ್ದು, 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಕಾಂಗ್ರೆಸ್​ ಖಾತೆ ತೆರೆಯುವಲ್ಲಿ ವಿಫಲವಾಗಿದೆ.(ಏಜೆನ್ಸೀಸ್​)
Thank u so much sir. I look forward to working closely wid Centre to make our capital city into a truly world class city.https://t.co/IACEVA091c
— Arvind Kejriwal (@ArvindKejriwal)February 11, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 6 =
Remember me
