ಭೋಪಾಲ್:ಪೊಲೀಸ್ ಸಬ್​ಇನ್ಸ್​ಪೆಕ್ಟರ್​ ಮೇಲೆ ಠಾಣೆಯೊಳಗೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯಾರ್​ ಜಿಲ್ಲೆಯ ಶಿವಪುರಿಯಲ್ಲಿ ನಡೆದಿದೆ.ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿದಂತೆ ಪೊಲೀಸರು ಒಂಬತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್​ ಸಬ್​ಇನ್ಸ್​ಪೆಕ್ಟರ್​ ಕೆ.ಪಿ. ಶರ್ಮಾರನ್ನುತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕರೈರಾ ಪೊಲೀಸ್​ ಠಾಣಾಧಿಕಾರಿ ಸುರೇಶ್​ ಶರ್ಮಾ, ಬಂಧಿತ ಆರೋಪಿಗಳು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಲು ಠಾಣೆಗೆ ಆಗಮಿಸಿದ್ದರು. ಬಂಧಿತ ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದೂರು ದಾಖಲಿಸಲಾಗಿತ್ತು. ಈ ಸಂಬಂಧ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿತ್ತು.
ಇದನ್ನೂ ಓದಿ:ದೆಹಲಿಯಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ
ಬಂಧಿತ ಆರೋಪಿಗಳು ಪೊಲೀಸ್​ ವಿಚಾರಣೆ ನಡೆಯುತ್ತಿದ್ದ ವೇಳೆ ತಮ್ಮ ಮೊಬೈಲ್​ನಲ್ಲಿ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದರು. ಇದಕ್ಕೆ ಸಬ್​ಇನ್ಸ್​ಪೆಕ್ಟರ್​ ಕೆ.ಪಿ. ಶರ್ಮಾ ​ಆಕ್ಷೇಪ ವ್ಯಕ್ತಪಡಿಸಿದ್ದು, ವಿಡಿಯೋ ಚಿತ್ರೀಕರಿಸದಂತೆ ತಾಕೀತು ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ಏಕಾಏಕಿ ಪೊಲೀಸ್​ ಅಧಿಕಾರಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿದಂತೆ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಿದ್ದಪಡಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಕರೈರಾ ಪೊಲೀಸ್​ ಠಾಣಾಧಿಕಾರಿ ಸುರೇಶ್​ ಶರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 11 =
Remember me
