ವಯಾನಾಡು:ಕೇರಳದಲ್ಲಿ ಆರು ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಇನ್ನೊಂದೆಡೆ ಕೋಳಿಕ್ಕೋಡ್​ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡು, ಸುತ್ತಮುತ್ತಲಿನ ಕೋಳಿ ಫಾರ್ಮ್​ಗಳನ್ನೂ ಮುಚ್ಚಲಾಗಿದೆ. ಅನೇಕ ಕೋಳಿಗಳನ್ನು ಕೊಂದು, ಸುಟ್ಟುಹಾಕಲಾಗಿದೆ ಎಂದೂ ವರದಿಯಾಗಿದೆ.
ಇದೆಲ್ಲದರ ಮಧ್ಯೆ ಇನ್ನೊಂದು ರೋಗ ಕೇರಳದ ವಯಾನಾಡಿಗೆ ಕಾಲಿಟ್ಟಿದ್ದು, ಮಹಿಳೆಯೋರ್ವರನ್ನು ಬಲಿಪಡೆದಿದೆ. 48 ವರ್ಷದ ಮಹಿಳೆ ಮೀನಾಕ್ಷಿ ಎಂಬುವರು ಮಂಗನ ಕಾಯಿಲೆ (ಕೆಎಫ್​ಡಿ)ಯಿಂದ ಮೃತಪಟ್ಟಿದ್ದಾರೆ.
ಮೀನಾಕ್ಷಿ ಅವರಲ್ಲಿ ಮಂಗನ ಕಾಯಿಲೆ ಇರುವುದು ಮಾರ್ಚ್​ 5ರಂದು ದೃಢಪಟ್ಟಿತ್ತು. ಅವರಿಗೆ ಕೋಳಿಕ್ಕೋಡ್​ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ವಯಾನಾಡಿನಲ್ಲಿ ಮೀನಾಕ್ಷಿ ಸೇರಿ ಒಟ್ಟು13 ಜನರಿಗೆ ಕೆಎಫ್​ಡಿ ಸೋಂಕು ತಗುಲಿತ್ತು. ಒಂಭತ್ತು ಜನರಿಗೆ ಚಿಕಿತ್ಸೆ ಪೂರ್ಣಗೊಂಡಿದ್ದು ಅವರು ಗುಣಮುಖರಾಗುತ್ತಿದ್ದಾರೆ. ಇನ್ನುಳಿದ ನಾಲ್ವರು ಇನ್ನೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.(ಏಜೆನ್ಸೀಸ್​)
ಕೇರಳದಲ್ಲಿ ಮೂರು ವರ್ಷದ ಮಗುವಿನಲ್ಲಿ ಕೊರೊನಾ ಸೋಂಕು; ಪ್ರತ್ಯೇಕ ವಾರ್ಡ್​ನಲ್ಲಿಟ್ಟು ಚಿಕಿತ್ಸೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
