ಅಹಮದಾಬಾದ್​:ಕರೊನಾ ಸೋಂಕು ಕಡಿಮೆಯಾಗಿದೆಯಾದರೂ ಸಂಪೂರ್ಣವಾಗಿ ಹೋಗಿಲ್ಲ. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ಮಾತ್ರವೇ ಸೋಂಕು ನಿಯಂತ್ರಣ ಸಾಧ್ಯವಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬರು ಮಾಸ್ಕ್​ ಧರಿಸಿ, ಅಂತರ ಕಾಯ್ದುಕೊಳ್ಳಿ ಎಂದು ಸರ್ಕಾರ ಸಾಕಷ್ಟು ಮನವಿ ಮಾಡಿದೆ. ಆದರೂ ಕೇಳದ ಕೆಲವೊಬ್ಬರು ಅಧಿಕಾರಿಗಳ ಮೇಲೇ ರೇಗಾಡುತ್ತಾರೆ. ನಿವೃತ್ತ ಮಹಿಳಾ ಅಧಿಕಾರಿಯೊಬ್ಬರಿಗೆ ಮಾಸ್ಕ್​ ಹಾಕಿಕೊಳ್ಳುವಂತೆ ಹೇಳಿದ್ದಕ್ಕೆ, ಆಕೆ ಪೊಲೀಸರಿಗೇ ಹಲ್ಲೆ ಬೆದರಿಕೆ ಹಾಕಿರುವ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ.
ಇದನ್ನೂ ಓದಿ:ಆನ್​ಲೈನ್​ನಲ್ಲಿ ಬಟ್ಟೆ ತರಿಸುವ ಖಯಾಲಿಯೇ? ಈ ವಿಚಾರದ ಬಗ್ಗೆ ಎಚ್ಚರವಾಗಿರಿ!
ನಿವೃತ್ತ ಸೇಲ್ಸ್​ ಟ್ಯಾಕ್ಸ್​ ಆಫೀಸರ್​ ಆಗಿರುವ ರೀತಾ ಪಟೇಲ್​(68) ಅವರು ತನ್ನ ಮಗ ಮತ್ತು ಸೊಸೆಯೊಂದಿಗೆ ಕಾರಿನಲ್ಲಿ ಅಹಮದಾಬಾದ್​ನ ನಿರ್ಮಾ ವಿಶ್ವವಿದ್ಯಾಲಯದ ಬಳಿ ಬರುತ್ತಿದ್ದರು. ಈ ವೇಳೆ ಮಗ ಸೊಸೆ ಮಾಸ್ಕ್​ ಹಾಕಿದ್ದರಾದರೂ ರೀತಾ ಅವರು ಹಾಕಿರಲಿಲ್ಲ. ಹೀಗಾಗಿ ಪೊಲೀಸರು ಗಾಡಿ ನಿಲ್ಲಿಸಿದ್ದು, ಮಾಸ್ಕ್​ ಹಾಕಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಆದರೆ ಅಷ್ಟಕ್ಕೇ ಸಿಟ್ಟಿಗೆದ್ದ ರೀತಾ, ನಾನು ಮಾಸ್ಕ್​ ಹಾಕಿಕೊಳ್ಳುವುದಿಲ್ಲ. ಹೆಚ್ಚಿಗೆ ಮಾತನಾಡಿದರೆ ನಿಮ್ಮ ಕೆನ್ನೆ ಮೇಲೆ ಏಟು ಕೊಡಬೇಕಾಗುತ್ತದೆ ಎಂದು ಧಮಕಿ ಹಾಕಿದ್ದಾರೆ.
ಇದನ್ನೂ ಓದಿ:ಒಂದೇ ವರ್ಷದಲ್ಲಿ 23 ಮಕ್ಕಳ ತಂದೆಯಾದ ಭೂಪ! ಹೆಣ್ಣು ಮಕ್ಕಳು ಇವನ ಮಾತನ್ನೇ ಕೇಳಲ್ವಂತೆ
ಈ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಾಕ್​ಡೌನ್​ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ರೀತಾ ಮತ್ತು ಅವರ ಮಗ ಪಾರಿತೋಷ್​ ಮೇಲೆ ಪೊಲೀಸ್​ ಪ್ರಕರಣ ದಾಖಲಾಗಿದೆ. (ಏಜೆನ್ಸೀಸ್​)
ಲಾಡ್ಜ್​ಗೆ ಬರುವಾಗ ಇಬ್ಬರು, ಹೋಗುವಾಗ ಒಬ್ಬನೇ: ಮುಚ್ಚಿದ್ದ ಕೊಠಡಿ ತೆರೆದವರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 9 =
Remember me
