ಮುಂಬೈ:ಮಹಿಳಾ ಪ್ರಯಾಣಿಕರೊಬ್ಬರು ಲಗೇಜ್​ಗೆ ಹಣ ಪಾವತಿಸುವ ವಿಚಾರವಾಗಿ ಹುಸಿ ಬಾಂಬ್​ ಭೀತಿ ಸೃಷ್ಟಿಸಿದ ಘಟನೆ ಮುಂಬೈನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಸುದ್ದಿ ಮೂಲಗಳ ಪ್ರಕಾರ ಮಹಿಳಾ ಪ್ರಯಾಣಿಕರೊಬ್ಬರು ತಮ್ಮ ಬ್ಯಾಗ್​ನಲ್ಲಿ ಬಾಂಬ್​ ಇರುವುದಾಗಿ ಹೇಳಿ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣವನ್ನು ಸೃಷ್ಟಿಸಿದ್ದರು.
ಇದನ್ನೂ ಓದಿ:ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ; ಸಹಾಯಕ್ಕೆ ಬಾರದೆ ಕುಣಿದು ಕುಪ್ಪಳಿಸಿದ ಪತಿರಾಯ!
ಮುಂಬೈನಿಂದ ಕೊಲ್ಕತ್ತಾಗೆ ಪ್ರಯಾಣಿಸುತ್ತಿದ್ದ ಮಹಿಳೆ ಹೆಚ್ಚುವರಿ ಲಗೇಜ್​ ಹೊಂದಿದ್ದನ್ನು ಗಮನಿಸಿದ ಸಿಬ್ಬಂದಿ ಹಣವನ್ನು ಪಾವತಿಸುವಂತೆ ಸೂಚಿಸಿದ್ದಾರೆ. ಈ ವೇಳೆ ಆಕೆ ತನ್ನ ಬ್ಯಾಗ್​ನಲ್ಲಿ ಬಾಂಬ್​ ಇರುವುದಾಗಿ ಹೇಳಿ ಶುಲ್ಕ ವಿನಾಯ್ತಿ ಪಡೆಯಲು ಯತ್ನಿಸಿದ್ದಾಳೆ.
ವಿಮಾನ ನಿಲ್ದಾಣದ ಅಧಿಕಾರಿಗಳು ಮಹಿಳೆಯ ಬ್ಯಾಗ್​ ಪರಿಶೀಲಿಸಿದಾಗ ಅನುಮಾನಸ್ಪದ ವಸ್ತುಗಳು ಕಂಡು ಬಂದಿಲ್ಲ. ಈ ಕುರಿತು ಸಹರ್​ ಪೊಲೀಸ್​ ಠಾಣೆಯಲ್ಲಿ ಮಹಿಳೆಯ ವಿರುದ್ಧ ಭಾರತ ದಂಡ ಸಂಹಿತೆ(IPC Section) 336 ಮತ್ತು 505(2) ಅಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + ten =
Remember me
