ಅಹಮದಾಬಾದ್:ದೇಶದಲ್ಲಿ ದಿನದಿಂದ ದಿನಕ್ಕೆ ದಲಿತರ ಮೇಲಿನ ಅಟ್ಟಹಾಸ ಹಾಗೂ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕಾನೂನು ಜಾರಿ ಮಾಡಿದರು ಯಾವುದೇ ಪ್ರಯೋಜನವಾಗುತ್ತಿಲ್ಲ. ಇದೀಗ ಅದೇ ರೀತಿಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಗುಜರಾತಿನ ಮೋರ್ಬಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಘಟನೆಯಲ್ಲಿ ಪೊಲೀಸ್​ ವರಿಷ್ಠಾಧಿಕಾರಿ ದೂರು ದಾಖಲಿಸಿಕೊಳ್ಳದೆ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ:ಡಿಕೆಶಿ ವಿರುದ್ಧದ ಸಿಬಿಐ ಕೇಸ್​ ವಾಪಸ್; ಇದು ಕಾನೂನು ಬಾಹಿರ ಕ್ರಮ ಎಂದ ವಿಪಕ್ಷ ನಾಯಕ ಆರ್​. ಅಶೋಕ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸಂತ್ರಸ್ತ ನೀಲೇಶ್ ದಲ್ಸಾನಿಯಾ (21) ಮೋರ್ಬಿಯಲ್ಲಿರುವ ಪ್ರತಿಷ್ಠಿತ ಟೈಲ್ಸ್​ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಆತನನ್ನು ತಿಂಗಳ ಸಂಬಳಕ್ಕೆ ಸೇರಿಸಿಕೊಳ್ಳಲಾಗಿತ್ತು. ಕೆಲಸಕ್ಕೆ ಸೇರಿದ 16 ದಿನಗಳ ಬಳಿಕ ಆತನನ್ನು ತೆಗೆದು ಹಾಕಲಾಗಿತ್ತು. ಕೆಲ ದಿನಗಳ ಬಳಿಕ ಆತ 16 ದಿನಗಳ ಕೂಲಿ ಕೊಡುವಂತೆ ಆರೋಪಿಗಳಾದ ವಿಭೂತಿ ಪಟೇಲ್, ಪರೀಕ್ಷಿತ್ ಪಟೇಲ್, ಓಂ ಪಟೇಲ್​ ಸೇರಿದಂತೆ ಇನ್ನೋರ್ವ ವ್ಯಕ್ತಿ ಆತನ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಬಳಿಕ ವಿಭೂತಿ ಪಟೇಲ್​ ಧರಿಸಿದ್ದ ಚಪ್ಪಲಿಗಳನ್ನು ಬಾಯಿಯಲ್ಲಿ ಇಟ್ಟುಕೊಂಡು ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ. ಬಳಿಕ ದೂರು ಕೊಟ್ಟರೆ ಜೀವಂತ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಬಳಿಕ ಗಾಯಾಳು ಯುವಕ ದೂರು ದಾಖಲಿಸಲು ಮುಂದಾದಾಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯಾವುದೇ ಪ್ರತಿಕ್ರಿಯೆಯನ್ನು ನೀಡದೆ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದು, ಪತ್ತೆ ಹಚ್ಚಲು ವಿಶೇಷ ತಂಡ ಒಂದನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
