ಭೋಪಾಲ್:ಮಧ್ಯಪ್ರದೇಶದ ಧಾರ್ ಜಿಲ್ಲೆಯ ತಾಂಡಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಕೆಲವರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಬದಲಾದ ಟ್ರಂಪ್​ ನಿಲುವು..ಅಮೆರಿಕಾದಲ್ಲಿರುವ ವಿದೇಶಿ ವಿದ್ಯಾರ್ಥಿಗಳಿಗೆ ಗ್ರೀನ್ ಕಾರ್ಡ್!
ವೀಡಿಯೊದಲ್ಲಿ, ಕೆಲವರು ಮಹಿಳೆ ಮೇಲೆ ಮನಬಂದಂತೆ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಆಕೆ ತನ್ನನ್ನು ರಕ್ಷಿಸುವಂತೆ ಪಕ್ಕದಲ್ಲಿದ್ದವರಿಗೆ ಮನವಿ ಮಾಡಿದ್ದಾಳೆ. ಆದರೆ ಪಕ್ಕದಲ್ಲಿದ್ದವರು ಆಕೆಯನ್ನು ರಕ್ಷಿಸುವ ಬದಲು ತಮ್ಮ ಮೊಬೈಲ್‌ನಲ್ಲಿ ಘಟನೆಯನ್ನು ಚಿತ್ರೀಕರಿಸಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸಚಿವೆಯಾಗಿ ನೇಮಕಗೊಂಡಿರುವ ಸಾವಿತ್ರಿ ಠಾಕೂರ್ ಅವರ ಕ್ಷೇತ್ರದಲ್ಲಿ ಈ ಘಟನೆ ನಡೆದಿರುವುದು ಗಮನಾರ್ಹ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹಲ್ಲೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ದಾಳಿಯ ಪ್ರಮುಖ ಶಂಕಿತನನ್ನು ಗಂಧವಾನಿ ಪ್ರದೇಶದ ನಿವಾಸಿ ನಿರ್ಸಿಂಗ್ ಎಂದು ಗುರುತಿಸಲಾಗಿದೆ. ಆದರೆ, ಈ ದಾಳಿಗೆ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಉಳಿದವರನ್ನು ಶೀಘ್ರವೇ ಬಂಧಿಸಲಾಗುವುದು. ಸಂತ್ರಸ್ತೆಗೆ ನ್ಯಾಯ ಸಿಗುವಂತೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೇ ತಿಂಗಳಲ್ಲಿ ಮಧ್ಯಪ್ರದೇಶದ ಅಶೋಕ್ ನಗರ ಜಿಲ್ಲೆಯಲ್ಲಿ ಕೆಲವರು ವೃದ್ಧ ದಂಪತಿಯನ್ನು ತೀವ್ರವಾಗಿ ಥಳಿಸಿ ಅವರ ಕುತ್ತಿಗೆಗೆ ಶೂ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ತಮ್ಮ ಮಗ ಹೆಣ್ಣುಮಕ್ಕಳನ್ನು ಹಿಂಬಾಲಿಸುತ್ತಿದ್ದ ಎಂಬ ಕಾರಣಕ್ಕೆ ಪೋಷಕರಿಗೆ ಈ ರೀತಿ ಶಿಕ್ಷೆ ವಿಧಿಸಲಾಗಿತ್ತು.
ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು: ಕಾರಣ ಇದೇ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 15 =
Remember me
