ತಿರುವನಂತಪುರಂ:ವ್ಯಕ್ತಿಯೋರ್ವ ತನ್ನ ಹೆತ್ತ ತಾಯಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕೇರಳ ಜಿಲ್ಲೆಯ ವೆಲ್ಲರಾದ ಬಳಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಮೃತ ಮಹಿಳೆಯ ಕಿರಿಯ ಮಗ ಮನೆ ಬಳಿ ತೆರಳಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ವಿಚಾರವನ್ನು ತಿಳಿಸಿದ್ದಾನೆ.
ಇದನ್ನೂ ಓದಿ:ಪದ್ಮಶ್ರೀ ಪ್ರಶಸ್ತಿ ಪ್ರಕಟ; ಕರ್ನಾಟಕದ ಪ್ರೇಮಾ, ಸೋಮಣ್ಣ ಪುರಸ್ಕಾರಕ್ಕೆ ಭಾಜನ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಯಾವ ಕಾರಣಕ್ಕೆ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ. ಮಹಿಳೆಯ ಕಿರಿಯ ಪುತ್ರ ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಆತ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾನೆ.
ಆರೋಪಿಯನ್ನು ಕೂಡಲೇ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಯಾವ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎಂಬುದರ ಕುರಿತು ಈವರೆಗೆ ಆತ ತಿಳಿಸಿಲ್ಲ. ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
