ಉತ್ತರಾಖಂಡ:ಶನಿವಾರ (ಜುಲೈ 27) ಸುರಿದ ಭಾರಿ ಮಳೆಯಿಂದಾಗಿ ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಅನೇಕ ಮನೆಗಳು ಹಾಗೂ ಅಂಗಡಿಗಳು ಕೊಚ್ಚಿ ಹೋಗಿದ್ದು, 42 ವರ್ಷದ ಮಹಿಳೆ ಮತ್ತು ಆಕೆಯ ಮಗಳು ಪ್ರಾಕೃತಿಕ ವಿಕೋಪದಲ್ಲಿ ದುರಂತ ಸಾವಿಗೀಡಾಗಿದ್ದಾರೆ.
ತೆಹ್ರಿ ಜಿಲ್ಲೆಯ ಬುಧಕೇದಾರ್ ಬಳಿಯ ಟೋಲಿ ಗ್ರಾಮದ ಸರಿತಾ ದೇವಿ (46) ಮತ್ತು ಆಕೆಯ ಮಗಳು 15 ವರ್ಷದ ಅಂಕಿತಾ ಮೃತ ದುರ್ದೈವಿಗಳು. ಕುಸಿದು ಬಿದ್ದಿದ್ದ ಮನೆಯ ಅವೇಶಗಳ ನಡುವೆ ಸಿಲುಕಿದ್ದ ಇಬ್ಬರ ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮಯೂರ್ ದೀಕ್ಷಿತ್ ಮಾತನಾಡಿ, ಮನೆಯ ಹಿಂದೆಗಡೆ ಇದ್ದ ತಡೆಗೋಡೆ ಕುಸಿದು ಅಮ್ಮ-ಮಗಳು ಇಬ್ಬರು ಜೀವಂತ ಸಮಾಧಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಉತ್ತರಾಖಂಡದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಮನೆಗಳು ಮತ್ತು ಅಂಗಡಿಗಳು ಕೊಚ್ಚಿಹೋಗಿವೆ. ಸೇತುವೆಗಳು ಮತ್ತು ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನರ ಜೀವನ ಅಸ್ತವ್ಯಸ್ತಗೊಂಡಿವೆ. ಮಳೆ ಹೀಗೆ ಮುಂದುವರಿದರೆ ಮತ್ತಷ್ಟು ಹಾನಿಯಾಗುವ ಸಾಧ್ಯೆತ ಇದೆ. ಭೂಕುಸಿತದಿಂದ ಹಾನಿಗೊಳಗಾದ ಎಲ್ಲರಿಗೂ ತಕ್ಷಣದ ನೆರವು ನೀಡುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ.
ತೆಹ್ರಿ ಜಿಲ್ಲೆಯ ಬುಧಕೇದಾರ್ ಬಳಿಯ ಟೋಲಿ ಗ್ರಾಮದಲ್ಲಿ ಭೂಕುಸಿತದಿಂದ ಮೃತಪಟ್ಟವರ ಬಗ್ಗೆ ದುಃಖದ ಸುದ್ದಿ ಬಂದಿದೆ. ಭೂಕುಸಿತದ ಸಂತ್ರಸ್ತರಿಗೆ ತಕ್ಷಣದ ನೆರವು ಒದಗಿಸಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಧಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.(ಏಜೆನ್ಸೀಸ್)
ರಶೀದ್​​ ಖಾನ್ ಸ್ಟೈಲ್​​ ಕಾಪಿ ಮಾಡಿದ ಪಾಕ್ ಕ್ರಿಕೆಟಿಗನಿಗೆ​ ಮುಖಭಂಗ! ಸಿಕ್ಕಾಪಟ್ಟೆ ಟ್ರೋಲ್​ ಆದ ಇಫ್ತಿಕರ್​

ಪ್ಯಾರಿಸ್​​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಪದಕ ಭರವಸೆ: ಫೈನಲ್​ಗೆ ಲಗ್ಗೆಯಿಟ್ಟ ಶೂಟರ್​ ಮನು ಭಾಕರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + ten =
Remember me
