ಮುಂಬೈ:ಫ್ಲ್ಯಾಟ್‌ನಲ್ಲಿ 78 ವರ್ಷ ವಯಸ್ಸಿನ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮುಂಬೈನ ರಾಜೇಂದ್ರ ನಗರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಗಣೇಶೋತ್ಸವ ಯಶಸ್ಸಿಗೆ ಅಗತ್ಯ ಸೌಲಭ್ಯ ಒದಗಿಸಿ ; ಜಿಲ್ಲಾಡಳಿತಕ್ಕೆ ತಿಲಕ ಗಣೇಶ ಮಹಾಮಂಡಳ ಮನವಿ
ಅಪಘಾತ ಮರಣ ವರದಿ (ADR) ಅಡಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಫ್ಲಾಟ್‌ನಲ್ಲಿ ಪತ್ತೆಯಾದ ಮಹಿಳೆಯನ್ನು ಸುಲೋಚನಾ ಭಾಸ್ಕರ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಎಡಿಆರ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಸ್ತೂರ್ಬಾ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯ ವಿವರ:ಬುಧವಾರ ಸಂಜೆ ಮಹಿಳೆ ವಾಸಿಸುತ್ತಿದ್ದ ಫ್ಲ್ಯಾಟ್‌​ನಿಂದ ದುರ್ವಾಸನೆ ಬಂದಿದೆ. ಈ ಬಗ್ಗೆ ನೆರೆಹೊರೆಯವರು ಕೂಡಲೇ ಕರೆ ಮಾಡಿ ನಮಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದೇವೆ ಎಂದು ಪೊಲೀಸರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಜ್ಞಾನವಾಪಿ ವಿವಾದ: ಅಲಹಾಬಾದ್​ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಮುಸ್ಲಿಂ ಸಮಿತಿ
ಜನರಿಂದ ಲಭಿಸಿದ ಮಾಹಿತಿ ಪ್ರಕಾರ, ಮಹಿಳೆಯ ಆರೋಗ್ಯ ಸರಿಯಾಗಿರಲಿಲ್ಲ. ಅವರಿಗೆ ರೇಷ್ಮಾ ಬಿರೇನ್ ಸಂಘರಾಜ್ ಎಂಬ ಓರ್ವ ಮಗಳಿದ್ದು, ಆಕೆ ಅಮೆರಿಕಾದಲ್ಲಿ ನೆಲೆಸಿದ್ದಾಳೆ ಎಂಬ ಸಂಗತಿ ನಮಗೆ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ,(ಏಜೆನ್ಸೀಸ್).
ಇಂಗ್ಲಿಷ್ ಆವೃತ್ತಿಯಲ್ಲಿ ರಿಲೀಸ್​ ಆಗಲಿದೆ ಪ್ರಭಾಸ್​​ ನಟನೆಯ ಸಲಾರ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + six =
Remember me
