ನವದೆಹಲಿ:ರೈಲು ನಿಲ್ದಾಣದಲ್ಲಿ ಮಳೆ ನೀರು ನಿಂತಿದ್ದರಿಂದ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಎಂದು ಗುರುತಿಸಲಾಗಿದೆ. ನವದೆಹಲಿ ರೈಲು ನಿಲ್ದಾಣದ ಆವರಣದಲ್ಲಿ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಎಫ್‌ಎಸ್‌ಎಲ್ ತಂಡ ಸ್ಥಳದಲ್ಲಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
A woman died due to electrocution on New Delhi railway station premises. FSL team is present on the spot. The body of the woman has been sent to Lady Hardinge Hospital for postmortem. Probe underway: Delhi Policepic.twitter.com/p4c6oqH0vh
— ANI (@ANI)June 25, 2023
ಸಾಕ್ಷಿ ಅಹುಜಾ ಅವರು, ಭೋಪಾಲ್ ರೈಲ್​ನಲ್ಲಿ ಪ್ರಯಾಣಿಸಲು ಇಲ್ಲಿಗೆ ಬಂದಿದ್ದಾಳೆ. ಮಳೆಯಿಂದಾಗಿ ರೈಲ್ವೆ ನಿಲ್ದಾಣದ ಹೊರಗೆ ಜಲಾವೃತವಾಗಿದೆ. ನೀರಿನಲ್ಲಿ ಹೋಗುವುದನ್ನು ತಪ್ಪಿಸಲು ಕಂಬವನ್ನು ಹಿಡಿದಿದ್ದಾರೆ. ಈ ವೇಳೆ ವಿದ್ಯುತ್​​​ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕಾಗಿ ದೂರನ್ನು ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಇದೇ ವೇಳೆ ಮೃತ ಮಹಿಳೆಯ ತಂದೆ ಲೋಕೇಶ್ ಕುಮಾರ್ ಚೋಪ್ರಾ ಮಾತನಾಡಿ, ‘ನಾವು ಚಂಡೀಗಢಕ್ಕೆ ಹೋಗುತ್ತಿದ್ದೆವು, ವಾಹನ ನಿಲುಗಡೆ ಪ್ರದೇಶದಲ್ಲಿದ್ದ ನನ್ನ ಮಗಳು ಸಾಕ್ಷಿ ಅಹುಜಾ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾಳೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಅಪಘಾತದಲ್ಲಿ ಸಾಕ್ಷಿ ಅವರ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
ಹೈದರಾಬಾದ್‌ನಲ್ಲಿ ಚಿನ್ನದ ಬಣ್ಣದ ರೇಂಜ್ ರೋವರ್ ಕಾರ್​​ ಹೊಂದಿರುವ ಏಕೈಕ ನಟ ಮಹೇಶ್ ಬಾಬು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eighteen =
Remember me
