ಆಲಪ್ಪುಳ:ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಕೇಳಿದ ಕೂಡಲೇ ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ.
ಮೃತ ತಾಯಿಯನ್ನು ಇಂದುಲೇಖಾ ಎಂದು ಗುರುತಿಸಲಾಗಿದೆ. ಈಕೆ ಆಲಪ್ಪುಳ ಜಿಲ್ಲೆಯ ಪುರಕ್ಕಾಡ್​ ಮೂಲದ ನಿವಾಸಿ. ಆಕೆಯ ಮಗ ನಿಧಿನ್​ (32) ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿಧಿನ್​ ಮೀನುಗಾರಿಕೆ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ 8 ಗಂಟೆಗೆ ನಿಧಿನ್​ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಸಾವಿನ ಸುದ್ದಿ ತಿಳಿದುಕೊಡಲೇ ಇಂದುಲೇಖಾ ಹೃದಯಾಘಾತಕ್ಕೆ ಒಳಗಾಗಿ ಪ್ರಾಣ ಬಿಟ್ಟಿದ್ದಾರೆ.
ನಿಧಿನ್​ನನ್ನು ಆಲಪ್ಪುಳದ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ 11 ಗಂಟೆಗೆ ಮೃತಪಟ್ಟನು. ತಾಯಿ ಮತ್ತು ಮಗ ಇಬ್ಬರನ್ನು ಇಂದು ಒಂದೇ ಕಡೆ ಶವ ಸಂಸ್ಕಾರ ಮಾಡಲಾಗಿದೆ.
ನಿಧಿನ್​ ಆತ್ಮಹತ್ಯೆ ಕಾರಣ ಏನೆಂಬುದು ಇನ್ನು ತಿಳಿಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಕುಡುಕ ಗಂಡನನ್ನು ಬಿಟ್ಟು ತವರಿಗೆ ತೆರಳಿದ ಪತ್ನಿ; ಮಚ್ಚು ಹಿಡಿದುಕೊಂಡು ಬಂದ ಪತಿಯಿಂದ ಹತ್ಯೆಗೆ ಯತ್ನ!

ನಾನು JDS ಬಿಡಲಿಲ್ಲ, ಅವರೇ ಕತ್ತು ಹಿಡಿದು ಹೊರಗೆ ಹಾಕಿದರು: ಎಸ್.ಆರ್.ಶ್ರೀನಿವಾಸ್

ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಪ್ರಾಣ ಬಿಟ್ಟ ದೈವ ನರ್ತಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 10 =
Remember me
