ಪಟ್ನಾ:ಇತ್ತೀಚಿನ ದಿನಗಳಲ್ಲಿ ಮದುವೆಯಗಾಲು ನಿರಾಕರಿಸಿದರು ಎಂಬ ಕಾರಣಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆಗೈದ, ಆಕೆಯ ಮೇಲೆ ಆ್ಯಸಿಡ್​ ಎರಚಿದ ಘಟನೆಗಳು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಸದ್ದು ಮಾಡುತ್ತಿವೆ. ಆದರೆ, ತನ್ನನ್ನು ಮದುವೆಯಾಗಲು ನಿರಾಕರಿಸಿದ ಎಂಬ ಕಾರಣಕ್ಕೆ ವೈದ್ಯರೊಬ್ಬರು ಪ್ರಿಯಕರನ ಜನನಾಂಗವನ್ನು ಕತ್ತರಿಸಿರುವ ಘಟನೆ ಬಿಹಾರದ ಸರನ್​ ಜಿಲ್ಲೆಯಲ್ಲಿ ನಡೆದಿದೆ.
ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಗಾಯಾಳುವನ್ನು ವೇದ್​ ಪ್ರಕಾಶ್​ (30) ಎಂದು ಗುರುತಿಸಲಾಗಿದೆ. ಈತ ಸರನ್​ ಜಿಲ್ಲೆಯ ಮಧುರಾನಗರದ ನಿವಾಸಿಯಾಗಿದ್ದು, 12ನೇ ವಾರ್ಡಿನ್​ ಕೌನ್ಸಿಲರ್​ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ವೈದ್ಯೆ ಅಭಿಲಾಷಾ (26)ಳನ್ನು ವಶಕ್ಕೆ ಪಡೆದಿದ್ದಾರೆ.
Doctor 🧑‍⚕️ girlfriend Cuts off Boyfriends🖊️isssss …. Because he refused to marry her …#Bihar#Saranpic.twitter.com/naB8qgpWjS
ಇದನ್ನೂ ಓದಿ:ರೇಣುಕಸ್ವಾಮಿ ಹತ್ಯೆ ಕೇಸ್​; ದರ್ಶನ್​ ಮನುಷ್ಯತ್ವ ಇರುವ ವ್ಯಕ್ತಿ, ಅವರಿಗೆ ಶಿಕ್ಷೆ ಆಗದೆ ಇರಲಿ ಎಂದ ನಿರ್ಮಾಪಕ ಕೆ. ಮಂಜು
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಕೌನ್ಸಿಲರ್‌ ವೇದ್‌ ಪ್ರಕಾಶ್‌ ನೋವಿನಿಂದ ನರಳುತ್ತಾ ಬೆಡ್‌ ಮೇಲೆ ನರಳಾಡುತ್ತಿದ್ದು, ವೈದ್ಯೆ ಅಭಿಲಾಷ ಜೋರಾಗಿ ಅಳುತ್ತಾ ಮದುವೆಗೆ ನಿರಾಕರಿಸಿದ್ದಕ್ಕಾಗಿ ನಾನು ಹೀಗೆ ಮಾಡಬೇಕಾಯಿತು ಎಂದು ಹೇಳುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ವೈರಲ್​ ಆಗಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಸಂತ್ರಸ್ತ ವೇದ್​​ ಹಾಗೂ ಅಭಿಲಾಷಾ 12 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಲಿವ್​ ಇನ್​ ರಿಲೇಷನ್​ಶಿಪ್​ನಲ್ಲಿದ್ದರು. ಮದುವೆಯಾಗುವುದಾಗಿ ನಂಬಿಸಿ ದೇವ್​ ಅಭಿಲಾಷಾಳೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿ ಬಳಿಕ ಅಂತರ ಕಾಯ್ದುಕೊಂಡಿದ್ದ. ಮದುವೆಯಾಗಲಯ ಸತಾಯಿಸುತ್ತಿದ್ದ ವೇದ್​ನ ನಡೆಯಿಂದ ಕೋಪಗೊಂಡ ಆಕೆ ಮನೆಗೆ ಕರೆಸಿ ಆತನ ಜನನಾಂಗವನ್ನೇ ಕತ್ತರಿಸಿದ್ದಾಳೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳು ನೀಡುವ ಹೇಳಿಕೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
