ಕೊಲ್ಲಂ:ವೈದ್ಯಕೀಯ ಚಿಕಿತ್ಸೆಗೆಂದು ಪೊಲೀಸರು ಕರೆತಂದಿದ್ದ ಆರೋಪಿಯೊಬ್ಬ ಚಿಕಿತ್ಸೆ ನೀಡುತ್ತಿದ್ದ ವ್ಯದ್ಯೆಯನ್ನು ಇರಿದು ಕೊಂದಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರ ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ವೈದ್ಯೆ ವಂದನಾ ದಾಸ್​(22) ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು ಆರೋಪಿ ಸಂದೀಪ್(42)​ಗೆ ಚಿಕಿತ್ಸೆ ನೀಡುವ ವೇಳೆ ಇರಿದು ಕೊಂದಿದ್ದಾನೆ.
ವೈದ್ಯೆಯ ಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ರಾಜ್ಯಾದ್ಯಂತ ಡಾಕ್ಟರ್​ಗಳು ಮುಷ್ಕರಕ್ಕೆ ಮುಂದಾಗಿದ್ದು ಮೇ 11ರಂದು ಒಂದು ದಿನದ ಧರಣಿಗೆ ಕರೆ ನೀಡಿದ್ಧಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಇಂಡಿಯನ್​ ಮೆಡಿಕಲ್​ ಅಸೋಸಿಯೇಷನ್​(IMA) ಅಧ್ಯಕ್ಷ ಡಾ. ಸುಲ್ಫಿ ನುಹೂ ಕಳೆದ ಕೆಲ ಸಮಯದಿಂದ ವೈದ್ಯರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಸರ್ಕಾರ ಕೂಡ ಕಠಿಣ ಕಾನೂನು ಜಾರಿಗೆ ತರುವ ಮೂಲಕ ಅಪರಾಧಿಗಳಿಗೆ ಶಿಕ್ಷೆ ನೀಡುವುದಾಗಿ ಹೇಳುತ್ತಿದೆ.
ಆದರೆ, ಸರ್ಕಾರ ಹೇಳಿದ ಹಾಗೆ ಯಾವುದು ನಡೆಯುತ್ತಿಲ್ಲ. ಕೇರಳದಲ್ಲಿ ಇದೇ ಮೊದಲ ಬಾರಿಗೆ ಕರ್ತವ್ಯದಲ್ಲಿದ್ದ ವೈದ್ಯರೊಬ್ಬರನನ್ನು ಹತ್ಯೆ ಮಾಡಿರುವುದು ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:30 ವಿದ್ಯುನ್ಮಾನ ಮತಯಂತ್ರಗಳಲ್ಲಿ ತಾಂತ್ರಿಕ ದೋಷ; ಎಚ್ಚೆತ್ತ ಅಧಿಕಾರಿಗಳು
ಆರೋಪಿ ಸಂದೀಪ್​ ನೆರೆಹೊರೆಯವರ ಜೊತೆ ಜಗಳವಾಡಿ ತೀವ್ರವಾಗಿ ಗಾಯಗೊಂಡು ಪೊಲೀಸರ ಸುಪರ್ದಿಯಲ್ಲಿದ್ದ. ಗಾಯಗೊಂಡಿದ್ದ ಆತನನ್ನು ಪೊಲೀಸರು ಹೆಚ್ಚಿನ ಚಿಕಿತ್ಸೆ ಕೊಡಿಸಲೆಂದು ಪೊಲೀಸರು ಕೊಟ್ಟಾರಕಂನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆರೋಪಿ ಕಾಲಿಗೆ ತೀವ್ರವಾಗಿ ಪೆಟ್ಟಾಗಿದ್ದ ಕಾರಣ ವೈದ್ಯೆ ಚಿಕಿತ್ಸೆ ನೀಡಿ ಡ್ರೆಸ್ಸಿಂಗ್​ ಮಾಡುತ್ತಿದ್ದರು. ಈ ವೇಳೆ ಆರೋಪಿ ಪಕ್ಕದ ಟೇಬಲ್​ನಲ್ಲಿ ಇಟ್ಟಿದ್ದ ಸಲಕರಣೆಗಳನ್ನು ತೆಗೆದುಕೊಂಡು ಪೊಲೀಸರಿಗೆ ಬೆದರಿಸಿ ವಂದನಾಗೆ ಹಲವಾರು ಬಾರಿ ಇರಿದು ಕೊಂದಿದ್ದಾನೆ.
ಈ ವೇಳೆ ಆರೋಪಿಯನ್ನು ಹಿಡಿಯಲು ಮುಂದಾದ ಪೊಲೀಸ್​ ಹಾಗೂ ವೈದ್ಯರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಪೊಲೀಸರು ಹಾಗೂ ಆಸ್ಪತ್ರೆಯಲ್ಲಿದ್ದ ಇತರರ ಸಹಾಯದೊಂದಿಗೆ ಆರೋಪಿಯನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 12 =
Remember me
