ಭೋಪಾಲ್​:ಘಟನೆ ಒಂದರಲ್ಲಿ ಮಹಿಳೆ ಒಬ್ಬರು ಪೊಲೀಸ್​ ಠಾಣೆ ಎದುರು ತಮ್ಮ ಕಾರನ್ನು ನಿಲ್ಲಿಸಿ ಅಧಿಕಾರಿಗಳ ಮೇಲೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಘಟನೆಯೂ ಮಧ್ಯಪ್ರದೇಶದ ನೀಮುಚ್​ ಜಿಲ್ಲೆಯ ಕ್ಯಾಂಟ್​​ ಪೊಲೀಸ್​ ಠಾಣೆ ಎದುರು ನಡೆದಿದ್ದು, ಮಹಿಳೆ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೂಷಿಸುತ್ತಿರುವುದು ಕಂಡು ಬರುತ್ತದೆ.
ಶಾಂತಿ ಭಾಯಿ ಎಂಬ ಮಹಿಳೆಯೂ ತನ್ನ ಮಗ ಆಶಿಶ್​ ಲೋಟ್​ ಪ್ರತಿ ನಿತ್ಯ ಮನಬಂದಂತೆ ಥಳಿಸುತ್ತಿದ್ದಾನೆ. ಈ ಕುರಿತು ಹಲವು ಬಾರಿ ನೀಮುಚ್​ ಕ್ಯಾಂಟ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದರು ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಮಹಿಳೆ ದೂರಿದ್ದಾರೆ.
ನಾನು ಪ್ರತಿ ಬಾರಿಯೂ ನನ್ನ ಮಗನ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು ಅವರು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಅದಕ್ಕಾಗಿಯೇ 500 ರೂ. ಮುಖಬೆಲೆಯ ನೋಟಿನ ಬಂಡಲ್​ ತಂದು ಠಾಣೆಯ ಮುಂಭಾಗ ಎಸೆದಿದ್ದೇನೆ ಎಂದು ಮಹಿಳೆ ಹೇಳುತ್ತಿರುವುದು ಕಂಡು ಬರುತ್ತದೆ.


An elderly woman created#ruckusin front of Neemuch Cantt police station on Thursday night as she abruptly stopped vehicles on road, threw currency notes. She blamed PM#Modiand CM#ShivrajSinghChouhanafter police did not pay heeds to her complaints about her violent son.pic.twitter.com/R8GIcXD3je
ನಿವೃತ್ತ ಎನ್​ಸಿಸಿ ಅಧಿಕಾರಿಯಾಗಿರುವ ಶಾಂತಿ ಭಾಯಿ ಮಧ್ಯಪ್ರದೇಶ ಸರ್ಕಾರ ಹಾಗೂ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಹಿಳೆಯರಿಗಾಗಿ ಜಾರಿಗೆ ತಂದಿರುವ ಲಾಡ್ಲಿ ಬೆಹ್ನಾ ಯೋಜನೆಯನ್ನು ಕಟುವಾಗಿ ಟೀಕಿಸಿತ್ತಿರುವುದು ಸಹ ವಿಡಿಯೋದಲ್ಲಿ ಕಂಡು ಬಂದಿದೆ.
ಇದನ್ನೂ ಓದಿ:40ಕ್ಕೂ ಹೆಚ್ಚು ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ; ವಿಚಾರಣೆ ವೇಳೆ ಹೊರಬಿತ್ತು ಸ್ಫೋಟಕ ಮಾಹಿತಿ
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ನೀಮುಚ್​ ಕ್ಯಾಂಟ್​ ಪೊಲೀಸ್​ ಠಾಣೆಯ ಹೆಡ್​ ಕಾನ್ಸ್​ಟೇಬಲ್​ ಸುರೇಂದ್ರ ಸಿಂಗ್​ ಶಾಂತಿ ಭಾಯಿ ಹಾಗೂ ಡ್ಯಾನ್ಸ್​ ಮಾಸ್ಟರ್​ ಆಗಿ ಕೆಲಸ ಮಾಡುತ್ತಿರುವ ಆಕೆಯ ಪುತ್ರ ಆಶಿಶ್​ ನಡುವೆ ಕಳೆದ ಆರು ತಿಂಗಳಿನಿಂದ ಹಣಕಾಸು ವಿಚಾರವಾಗಿ ತಗಾದೆ ನಡೆಯುತ್ತಿದೆ.
ಮಹಿಳೆಯೂ ಆಕೆಯ ಪುತ್ರನ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಅದರ ವಿಚಾರಣೆ ನಡೆಯುತ್ತಿದೆ. ಹಾಗಿದ್ದರೂ ಅವರು ಪೊಲೀಸ್​ ಠಾಣೆಯಲ್ಲಿ ಹಲ್ಲೆ ಸಂಬಂಧ ದೂರು ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
