ವಿದಿಶಾ:ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಲ್ಲೇ ಜನಿಸಿದ ಹೆಣ್ಣು ಮಗುವಿಗೆ ಆ ರೈಲಿನ ಹೆಸರು ನಾಮಕರಣ ಮಾಡಿರುವ ಅಪರೂಪದ ಘಟನೆ ನಡೆದಿದೆ. 24 ವರ್ಷದ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಚಲಿಸುತ್ತಿರುವ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದ್ದರು.
ಇದನ್ನೂ ಓದಿ:ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ: ಕೋಲಾರ ಸಂಸದ ಮುನಿಸ್ವಾಮಿ
ಶುಕ್ರವಾರ ಮುಂಜಾನೆ ಮುಂಬೈ-ವಾರಣಾಸಿ ಕಾಮಯಾನಿ ಎಕ್ಸ್‌ಪ್ರೆಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಹರ್ಷಗೊಂಡ ಕುಟುಂಬಸ್ಥರು ಮಗುವಿಗೆ ರೈಲಿನ ಹೆಸರಿಡಲು ಮುಂದಾಗಿದ್ದಾರೆ.
ಮಹಿಳೆ ತನ್ನ ಪತಿಯೊಂದಿಗೆ ಮಹಾರಾಷ್ಟ್ರದ ನಾಸಿಕ್​ನಿಂದ ಮಧ್ಯಪ್ರದೇಶದ ಸತ್ನಾಗೆ ಪ್ರಯಾಣಿಸುತ್ತಿದ್ದರು. ಭೋಪಾಲ್ ಮತ್ತು ವಿದಿಶಾ ನಡುವೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ. ಆ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಗರ್ಭಿಣಿಗೆ ಹೆರಿಗೆ ಮಾಡಿಸಲು ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ.
ರೈಲು ವಿದಿಶಾ ರೈಲು ನಿಲ್ದಾಣಕ್ಕೆ ಬಂದ ನಂತರ, ನವಜಾತ ಶಿಶು ಮತ್ತು ತಾಯಿಯನ್ನು ಅವರ ಆರೋಗ್ಯದ ಪರೀಕ್ಷೆಗಾಗಿ ಹರ್ದಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆರ್‌ಪಿಎಫ್ ಅಧಿಕಾರಿ ತಿಳಿಸಿದ್ದಾರೆ. ಹಾಗೂ ರೈಲಿನಲ್ಲಿ ಜನಿಸಿದ ಮಗುವಿಗೆ ‘ಕಾಮಯಾನಿ’ ಎಂದು ಹೆಸರಿಸಿಟ್ಟಿದ್ದಾರೆ.
ಮಾಸ್ಕೋದಲ್ಲಿ ಉಗ್ರರ ಅಟ್ಟಹಾಸ: ಸಾವಿನ ಸಂಖ್ಯೆ 115ಕ್ಕೆ ಏರಿಕೆ, 11 ದಾಳಿಕೋರರ ಬಂಧನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
