ಅರುಣಾಚಲಪ್ರದೇಶ:ಅಪ್ರಾಪ್ತ ವಯಸ್ಕ ಸಹೋದರಿಯನ್ನು ಬಳಸಿಕೊಂಡುಮುಂದಿಟ್ಪಟುಕೊಂಡುತಿಯ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ ಮಹಿಳೆಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಅರುಣಾಚಲಪ್ರದೇಶದ ಪೂರ್ ವ ಸಿಯಾಂಗ್​ ಜಿಲ್ಲೆಯ ನ್ಯಾಯಾಲಯವು ಪೋಕ್ಸೋ ಕಾಯ್ದೆ ದುರ್ಬಳಕೆಯಾಗುತ್ತಿರುವ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದೆ.
ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ತಗೆಂಗ್​ ಪಡೋಹ್​ ಅವರಿದ್ದ ಏಕಸದಸ್ಯ ಪೀಠವು ತನ್ನ ಸಹೋದರಿಯನ್ನು ಮುಂದಿಟ್ಟುಕೊಂಡು ಸುಳ್ಳು ಮೊಕದ್ದಮೆಯನ್ನು ದಾಖಲಿಸಿದ ಮಹಿಳೆಗೆ ಒಂದು ತಿಂಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ.
ಲೈಂಗಿಕ ಕಿರುಕುಳದಂತಹ ಪ್ರಕರಣಗಳಿಂದ ಮಕ್ಕಳನ್ನು ರಕ್ಷಿಸಲು ಪೋಕ್ಸೋ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ, ಇದನ್ನು ದುರುಪಯೋಗಪಡಿಸಿಕೊಳ್ಳಬಾತದೆಂದು ಸಹ ಕಾನೂನಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ನ್ಯಾಯಾಮೂರ್ತಿಗಳು ಆಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ:ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಇತ್ತ ಆರೋಪಿತ ಮಹಿಳೆಯ ವಕೀಲರು ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ತನ್ನ ಕಕ್ಷಿದಾರರು ಹಲವು ಬಾರಿ ಪೊಲೀಸರಿಗೆ ದೂರು ನೀಡಿದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಇದರಿಂ ದ ಮನನೊಂದು ಮಹಿಳೆ ತನ್ನ ಸಹೋದರಿಯ ಸಹಾಯದೊಂದಿಗೆ ಈ ರೀತಿ ಮಾಡಿದ್ದಾರೆ. ದಯವಿಟ್ಟು ಅವರಿಗೆ ನ್ಯಾಯವನ್ನು ದೊರಕಿಸಿಕೊಡಿ ಎಂದು ಆರೋಪಿತ ಮಹಿಳೆಯ ವಕೀಲರು ತಮ್ಮ ವಾದವನ್ನು ಮಂಡಿಸಿದ್ದರು.
ಈ ವೇಳೆ ಮದ್ಯಪ್ರವೇಶಿಸಿದ ಪಬ್ಲಿಕ್​ ಪ್ರಾಸಿಕ್ಯೂಟರ್​ ಸಂಜೋಯ್​ ತಾಯೆ ಆರೋಪಿತ ಮಹಿಳೆಗೆ ನ್ಯಾಯಾಲಯ ಕೊಡುವ ಶಿಕ್ಷೆಯಲ್ಲಿ ಯಾವುದೇ ರಿಯಾಯಿತಿಯನ್ನು ನೀಡದಂತೆ ಮನವಿ ಮಾಡಿದ್ದರು. ಒಂದು ವೇಳೆ ಹಾಗೆ ಮಾಡಿದ್ದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನಿದಂತಾಗುತ್ತದೆ ಎಂದು ನತಮ್ಮ ವಾದವನ್ನು ಮಂಡಿಸಿದ್ದರು.
ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಾಮೂರ್ತಿಗಳು ಭಾರತ ದಂಡ ಸಂಹಿತೆ(IPC Section) 22(ಕಾನೂನು ದುರುಪಯೋಗ)ದಡಿ ಮಹಿಳೆಗೆ ಒಂದು ತಿಂಗಳ ಸೆರೆವಾಸ ಹಾಗೂ 20 ಸಾವಿರ ರೂಪಾಯಿ ದಂಡವನ್ನು ವಿಧಿಸಿ ತೀರ್ಪನ್ನು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
