ಶ್ರೀನಗರ:ಜಮ್ಮು-ಕಾಶ್ಮೀರದ ಶ್ರೀನಗರದ ಬಟಮಲೂ ಪ್ರದೇಶದಲ್ಲಿ ಗುರುವಾರ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ರಕ್ಷಣಾ ಪಡೆ ಮತ್ತು ಉಗ್ರ ನಡುವೆ ಗುಂಡಿನ ಚಕಮಕಿ ನಡೆದು, ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಬಟಮಲೂ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಆಧರಿಸಿ ಸೆಂಟ್ರಲ್ ರಿಸರ್ವ್ ಪೊಲೀಸ್​ ಫೋರ್ಸ್​ (ಸಿಆರ್​ಪಿಎಫ್​) ಯೋಧರು ಗುರುವಾರ ನಸುಕಿನಲ್ಲಿ ಶೋಧಕಾರ್ಯ ಆರಂಭಿಸಿದ್ದರು. ಬಟಮಲೂವಿನ ಫಿರ್ದೂಸಾಬಾದ್ ಎಂಬಲ್ಲಿ ನಸುಕಿನ 2.30ರ ವೇಳೆಗೆ ಶೋಧ ಕಾರ್ಯ ಆರಂಭವಾಗುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ದರು. ಪರಿಣಾಮ ರಕ್ಷಣಾ ಪಡೆಯ ಯೋಧರೂ ಪ್ರತಿದಾಳಿ ನಡೆಸಿದರು. ಈ ಸಂಘರ್ಷದಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಇಬ್ಬರು ಯೋಧರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಈ ಬಾರಿ ಐಪಿಎಲ್‌ನಲ್ಲಿ ಹೊಸದೇನಿದೆ? ಏನೇನು ಬದಲಾಗಿದೆ?
ಜಮ್ಮು-ಕಾಶ್ಮೀರ ಭಾಗದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನಷ್ಟು ಮಾಹಿತಿ ಬಹಿರಂಗವಾಗಬೇಕಷ್ಟೆ. (ಏಜೆನ್ಸೀಸ್)
ಪ್ರತ್ಯೇಕ ಸಚಿವಾಲಯ, ಬಜೆಟ್ ಬೇಡಿಕೆ; ಸಿಎಂ ಬಿಎಸ್​​ವೈ ಮೇಲೆ ನಿರೀಕ್ಷೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven − one =
Remember me
