ರಾಯ್ಪುರ:ಮದುವೆಯಾಗಿ ಎರಡು ಮುದ್ದಾದ ಮಕ್ಕಳಿರುವ ಮಹಿಳೆ 14 ವರ್ಷದ ಬಾಲಕನನ್ನೇ ಪ್ರೀತಿಸಿ ಆತನೊಂದಿಗೆ ಓಡಿ ಹೋಗಿರುವ ವಿಚಿತ್ರ ಘಟನೆ ಛತ್ತೀಸಗಢದ ಕೋರಬಾದದಲ್ಲಿ ನಡೆದಿದೆ. ಇದೀಗ ಇಬ್ಬರೂ ಸಿಕ್ಕಿಬಿದ್ದಿದ್ದು, ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಗಂಡ ಸರ್ಕಾರಿ ನೌಕರ. ಯಾವುದಕ್ಕೂ ಕೊರತೆಯಿಲ್ಲ ಎನ್ನುವಂತಹ ಕುಟುಂಬವದು. ಆದರೆ ಆ ಮಹಿಳೆಗೆ ಅದೇನಾಗಿತ್ತೋ ಏನೋ, 14 ವರ್ಷದ ಬಾಲಕನಿಗೇ ಪ್ರೇಮದ ಬಲೆ ಬೀಸಿದ್ದಳು. ಆತನೊಂದಿಗೇ ಬದುಕಬೇಕೆಂದು ಗಂಟು ಮೂಟೆ ಕಟ್ಟಿಕೊಂಡು ಆತನನ್ನು ಕರೆದುಕೊಂಡು ಓಡಿ ಹೋಗಿದ್ದಳು.
ಈ ವಿಚಾರವಾಗಿ ಎರಡೂ ಕುಟುಂಬಗಳ ಸದಸ್ಯರು ಪೊಲೀಸ್​ ಠಾಣೆಯ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ತಕ್ಷಣ ಕಾರ್ಯಪ್ರವರ್ತರಾದ ಪೊಲೀಸರು ಇವರಿಬ್ಬರ ಹುಡುಕಾಟ ಆರಂಭಿಸಿದ್ದಾರೆ. ಈ ಜೋಡಿ ಜಾಂಜಗೀರ-ಚಂಪಾ ಪ್ರದೇಶದಲ್ಲಿ ಸುತ್ತಾಡುತ್ತಿದ್ದು ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದರು. ಅವರನ್ನು ವಾಪಸು ಕರೆದುಕೊಂಡು ಬಂದ ಪೊಲೀಸರು ಮಹಿಳೆಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಎಫ್​ಐಆರ್​ ದಾಖಲಿಸಿದ್ದಾರೆ. ಬಾಲಕನನ್ನು ಆತನ ಮನೆಗೆ ವಾಪಸು ಕಳುಹಿಸಿಕೊಡಲಾಗಿದೆ. (ಏಜೆನ್ಸೀಸ್)
‘ಲೈಕ್​-ಶೇರ್​ ಮಾಡಿ, ದುಡ್ಡು ಕೊಡ್ತೀವಿ’ ಎಂದು ಮೋಸ ಮಾಡ್ತಾರೆ! ಕೆಲಸವಿಲ್ಲದ ಮಹಿಳೆಯರೇ ಇವರ ಟಾರ್ಗೆಟ್​!

ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:2 × 2 =
Remember me
