ಜೈಪುರ:ಭಾರತೀಯ ಸಂಸ್ಕೃತಿಯಲ್ಲಿ ಮದುವೆಗಳನ್ನು ಯಾವಾಗಲೂ ಅತ್ಯಂತ ಪವಿತ್ರ ಸಂಬಂಧವೆಂದು ಪರಿಗಣಿಸಲಾಗಿದೆ. ಸಂತೋಷದ ವೈವಾಹಿಕ ಜೀವನವನ್ನು ರೂಪಿಸುವ ಯಾವುದೇ ವಿಶಾಲವಾದ ವ್ಯಾಖ್ಯಾನಗಳಿಲ್ಲ. ಈ ಪರಿಸ್ಥಿತಿಯಲ್ಲಿ ವಿವಿಧ ಗೊಂದಲಗಳು ಮತ್ತು ಬಗೆಹರಿಯದ ಸಮಸ್ಯೆಗಳಿಂದ ವಿವಾಹೇತರ ಸಂಬಂಧಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ರಾಜಸ್ಥಾನದಲ್ಲಿ ಇಂತಹದ್ದೇ ಘಟನೆ ನಡೆದಿದೆ.
ಇದನ್ನೂ ಓದಿ:ಕೆನಡಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು: 24 ವರ್ಷದ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ
ವಿವಾಹಿತ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ಘಟನೆ ರಾಜಸ್ಥಾನದ ಬಾರ್ಮರ್​ ಜಿಲ್ಲೆಯಲ್ಲಿ ನಡೆದಿದೆ. ಸರ್ವಾಡಿ ಗ್ರಾಮದಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾರ್ಮರ್ ಜಿಲ್ಲೆಯ ಸರ್ವದಿ ಗ್ರಾಮದ ವ್ಯಕ್ತಿಯೊಬ್ಬರು ಅದೇ ಗ್ರಾಮದ ಮಹಿಳೆಯೊಂದಿಗೆ ಪರಿಚಯವಾಗಿತ್ತು. ಈ ಸಂಪರ್ಕ ಅನೈತಿಕ ಸಂಬಂಧಕ್ಕೆ ಕಾರಣವಾಗಿತ್ತು. ಗುಟ್ಟಾಗಿ ನಡೆಯುತ್ತಿದ್ದ ಇವರಿಬ್ಬರ ಸಂಬಂಧ ಕೆಲ ವರ್ಷಗಳ ನಂತರ ಹೊರಬಿದ್ದಿತ್ತು. ಇಂತಂಹ ಸಂಬಂಧಗಳಿಗೆ ಅಂತ್ಯವಾಡಬೇಕು ಎಂದು ಎರಡೂ ಕುಟುಂಬಗಳಿಗೂ ಎಚ್ಚರಿಕೆ ಸಹ ನೀಡಲಾಗಿತ್ತು.
ಈ ಎಚ್ಚರಿಕೆಗಳಿಗೆ ಕ್ಯಾರೆ ಎನ್ನದೆ ಪುನಃ ಒಂದಾಗುತ್ತಿದ್ದರು. ಈ ಸುದ್ದಿ ತಿಳಿದು ಕೋಪಗೊಂಡ ಕುಟುಂಬಸ್ಥರು ಮಹಿಳೆಯ ಮೇಲೆ ಹಲ್ಲೆ ಮಾಡಿ ಮನಬಂದಂತೆ ಥಳಿಸಿ ಅರೆಬೆತ್ತೆಲೆಯಾಗಿ ಮರವಣಿಗೆ ಮಾಡಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ಕೆಲವು ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಲಾಗಿದೆ. ವಿಡಿಯೋದಲ್ಲಿ ಮಹಿಳೆಯೊಬ್ಬರು ಅರೆಬೆತ್ತಲೆಯಾಗಿ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು.
ಈ ಸಂಬಂಧ ಸಂದಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಇದು ಬರೀ ಟ್ರೈಲರ್ ಅಷ್ಟೇ..; ನಟ ಸಲ್ಮಾನ್ ಮನೆ ಮೇಲೆ ದಾಳಿ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 3 =
Remember me
