ಬೆಂಗಳೂರು:ವಿಮಾನದಲ್ಲಿ ನೀಡುವ ಆಹಾರದಲ್ಲಿ ಜಿರಳೆ ಕಾಣಿಸಿಕೊಳ್ಳುವುದು, ಕೆಲವು ಪ್ರಯಾಣಿಕರ ಅಸಭ್ಯ ವರ್ತನೆ ಇತ್ಯಾದಿ ಮೂಲಕ ವಿಮಾನ ಪ್ರಯಾಣದ ವಿಚಾರಗಳು ಇತ್ತೀಚೆಗೆ ನಕಾರಾತ್ಮಕ ಸುದ್ದಿಗೆ ಒಳಗಾಗುತ್ತಿದ್ದು, ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.
ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಸಿದ್ದ ಮಹಿಳೆಯೊಬ್ಬರು ಚೇಳು ಕಡಿತಕ್ಕೆ ಒಳಗಾಗಿದ್ದಾರೆ. ಇವರು ಏರ್​ ಇಂಡಿಯಾ ವಿಮಾನದಲ್ಲಿ ನವದೆಹಲಿಯಿಂದ ನಾಗಪುರಕ್ಕೆ ತೆರಳುವಾಗ ಈ ಘಟನೆ ನಡೆದಿದೆ. ಏರ್​ ಇಂಡಿಯಾದ ಎಐ-630 ವಿಮಾನದಲ್ಲಿ ಏ. 23ರಂದು ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಅಮೆರಿಕದಲ್ಲಿ ಟೆಸ್ಲಾ ಕಾರಿಗೆ ಬಿಎಂಟಿಸಿಯ ಹಳೇ ಬಸ್​ನ ನಂಬರ್; ಏನಿದರ ಹಿನ್ನೆಲೆ?
ಏ. 23ರ ಎಐ 630 ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಚೇಳು ಕಚ್ಚಿದ ದುರದೃಷ್ಟಕರ ಹಾಗೂ ಅತಿವಿರಳ ಘಟನೆ ನಡೆದಿದೆ. ಲ್ಯಾಂಡ್ ಆಗುತ್ತಿದ್ದಂತೆ ಆಕೆಯನ್ನು ವೈದ್ಯರು ಪರೀಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆಕೆ ಚೇತರಿಸಿಕೊಂಡಿದ್ದಾರೆ. ನಮ್ಮ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗುವುದರಿಂದ ಬಿಡುಗಡೆ ಆಗುವವರೆಗೂ ಆಕೆಯೊಂದಿಗೆ ಇದ್ದು ಕಾಳಜಿ ವಹಿಸಿದ್ದಾರೆ ಎಂದು ಏರ್ ಇಂಡಿಯಾ ತಿಳಿಸಿದೆ.
ಇದನ್ನೂ ಓದಿ:ಜೊತೆಗಿದ್ದವನ ಹೆಣವನ್ನೇ 2 ವರ್ಷ ಫ್ರಿಡ್ಜ್​ನಲ್ಲಿಟ್ಟ; ಸತ್ತವನ ಹಣವನ್ನೇ ದಿನಗಟ್ಟಲೆ ಬಳಸಿಬಿಟ್ಟ!
ಘಟನೆ ಬಳಿಕ ವಿಮಾನವನ್ನು ಸಂಪೂರ್ಣ ಪರಿಶೀಲಿಸಿ ಸ್ವಚ್ಛಗೊಳಿಸಲಾಗಿದ್ದು, ಈ ಸಂದರ್ಭದಲ್ಲಿ ಚೇಳು ಪತ್ತೆಯಾಗಿದೆ ಎಂದು ಒಪ್ಪಿಕೊಂಡಿರುವ ಏರ್ ಇಂಡಿಯಾ, ಪ್ರಯಾಣಿಕರಿಗೆ ಆಗ ಅನನುಕೂಲದ ಕುರಿತು ವಿಷಾದ ವ್ಯಕ್ತಪಡಿಸಿದೆ. ಈ ಹಿಂದೆ ವಿಮಾನದಲ್ಲಿ ಜಿರಳೆ, ಇಲಿ, ಹಕ್ಕಿ, ಕೀಟಗಳು ಕಂಡುಬಂದಿದ್ದರೂ ಈ ರೀತಿ ಚೇಳು ಕಚ್ಚಿದ್ದು ಇದೇ ಮೊದಲು ಎನ್ನಲಾಗುತ್ತಿದೆ.
ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಬೆಲೆಯಲ್ಲಿ ಭಾರಿ ಇಳಿಕೆ; ಕಾರಣ ಇದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + eighteen =
Remember me
