ತಿರುಪತಿ:ಜಗನ್​ ಮೋಹನ್​ ರೆಡ್ಡಿ ನೇತೃತ್ವದ YSRCP​ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಜನಸೇನಾ ಪಕ್ಷದ ಕಾರ್ಯಕರ್ತರ ಮೇಲೆ ಮಹಿಳಾ ಪೊಲೀಸ್​ ಅಧಿಕಾರಿ ಹಲ್ಲೆ ನಡೆಸಿರುವ ಘಟನೆ ತಿರುಪತಿ ಜಿಲ್ಲೆಯ ಶ್ರೀಕಾಳಹಸ್ತಿಯಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಪೊಲೀಸ್​ ಅಧಿಕಾರಿ ಜನಸೇನಾ ಪಕ್ಷದ ಕಾರ್ಯಕರ್ತನ ಕಪಾಳಕ್ಕೆ ಹೊಡೆಯುತ್ತಿರುವುದು ಕಂಡು ಬರುತ್ತದೆ. ಈ ಕುರಿತು ಪರ-ವಿರೋಧದ ಚರ್ಚೆ ಜೋರಾಗಿ ನಡೆಯುತ್ತಿದೆ.
ಇತ್ತೀಚಿಗೆ ಕಾರ್ಯಕ್ರಮ ಒಂದರಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ ಮಾತನಾಡುವ ವೇಳೆ ಜನಸೇನಾ ಪಕ್ಷದ ಮುಖ್ಯಸ್ಥ, ನಟ ಪವನ್​ ಕಲ್ಯಾಣ್​ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಜಗನ್​ ಹೇಳಿಕೆಯ ವಿಡಿಯೋ ವೈರಲ್​ ಆದ ಬೆನ್ನಲ್ಲೇ ರಾಜ್ಯಾದ್ಯಂತ ಪವನ್​ ಅಭಿಮಾನಿಗಳು ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶವನ್ನು ಹೊರಹಾಕಿದ್ದರು.
A female police officer triggered a row by slapping a worker of the Jana Sena Party in#AndhraPradesh's#Srikalahastitown on Wednesday.pic.twitter.com/kviPxbi7kr
ಇದನ್ನೂ ಓದಿ:VIDEO| ಆನ್​ಲೈನ್​ ಗೇಮಿಂಗ್​ ಗೀಳಿಗೆ ಮಾನಸಿಕ ಸ್ಥಿಮಿತ ಕಳೆದುಕೊಂಡ ಬಾಲಕ
ಬುಧವಾರ ಶ್ರೀಕಾಳಹಸ್ತಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿ ಜನಸೇನಾ ಕಾರ್ಯಕರ್ತರು ಆಕ್ರೋಶವನ್ನು ಹೊರಹಾಕಿದ್ದರು. ಸಿಎಂ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವೇಳೆ ವಾಗ್ವಾದ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನಾ ನಿರತರನ್ನು ಠಾಣೆಯ ಮುಂಭಾಗ ಹಾಜರುಪಡಿಸಿದ ವೇಳೆ ಪೊಲೀಸ್​ ಅಧಿಕಾರಿ ಅಂಜು ಯಾದವ್​ ಜನಸೇನಾ ಪಕ್ಷದ ಕಾರ್ಯಕರ್ತನಿಗೆ ಎರಡು ಕೈಗಳಿಂದ ಕಪಾಳಕ್ಕೆ ಹೊಡೆಯುತ್ತಿರುವುದು ಕಂಡು ಬಂದಿದ್ದು, ಇದರ ವಿಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಲಾಗಿದೆ.
ಈ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಪೊಲೀಸ್​ ಅಧಿಕಾರಿ YSRCP ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಹಲ್ಲೆ ನಡೆಸಿದ ಅಧಿಕಾರಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಜನಸೇನಾ ಪಕ್ಷ ಆಗ್ರಹಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 13 =
Remember me
