ಲಖನೌ:ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮಗಳನ್ನು ಜಾರಿಗೊಳಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ.
ಇದೀಗ ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 35 ವರ್ಷದ ಮಹಿಳೆ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಭಾಗ್​ಪತ್​ ಜಿಲ್ಲೆಯಲ್ಲಿ ನಡೆದಿದೆ.
35 ವರ್ಷದ ವಿಚ್ಛೇದಿತ ಮಹಿಳೆಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಆಕೆಯ ನಂಬಿಕೆ ಗಳಿಸಿದ ನಾಲ್ವರು ಆರೋಪಿಗಳು ಬಳಿಕ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಚಾರ ಎಸಗಿದ್ದಾರೆ.
ಇದಾದ ಬಳಿಕ ಘಟನೆಯ ವಿಡಿಯೋವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿರುವ ಆರೋಪಿಗಳು ಬಳಿಕ ಮಹಿಳೆಗೆ ತೋರಿಸಿ ಬೆದರಿಕೆ ಒಡ್ಡಿ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾರೆ. ಇದಕ್ಕೆ ಒಪ್ಪದಿದ್ಧಾಗ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:PHOTO VIRAL | ಶತಕದ ಬೆನ್ನಲ್ಲೇ ಪತ್ನಿಗೆ ವಿಡಿಯೋ ಕಾಲ್​​​ ಮಾಡಿದ ಕೊಹ್ಲಿ!
ಘಟನೆ ಸಂಬಂಧ ಮಹಿಳೆ ನೀಡಿದ ದೂರಿನನ್ವಯ ಸೌರಭ್​, ಕಮಲ್​, ಶುಭಂ, ಸಾಗರ್​ ಎಂಬುವವರನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳ ವಯಸ್ಸು ಸುಮಾರು 20ರಿಂದ 26 ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.
ಆರೋಪಿಗಳನ್ನು ಭಾರತ ದಂಡ ಸಂಹಿತೆ(IPC Section)ಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
