ಲಖನೌ:ಆಘಾತಕಾರಿ ಘಟನೆಯೊಂದರಲ್ಲಿ ಬಾಕಿ ಮೊತ್ತವನ್ನು ಹಿಂತಿರುಗಿಸುವಂತೆ ಕೇಳಿದ್ದಕ್ಕೆ ಮಹಿಳೆಯೊಬ್ಬರಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಲು ಯತ್ನಿಸಿರುವ ಘಟನೆ ಉತ್ತರಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ.
ಹಣ ಹಿಂತಿರುಗಿಸುವ ವಿಚಾರವಾಗಿ ತನ್ನನ್ನು ಕೊಲೆ ಮಾಡಲು ಅಂಗಡಿಯವ ಮುಂದಾಗಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಗಾಯಾಳು ದೀಪಾ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆ ಬಳಿಕ ಆರೋಪಿ ತಲೆಮಾರಿಸಿಕೊಂಡಿದ್ದು, ಪೊಲೀಸರು ಆತನನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿದ್ದಾರೆ.
मैनपुरी यूपी में एक दुकान दार ने उधारी के चक्कर में महिला को पेट्रोल डाल कर जलाया#UttarPradshpic.twitter.com/BiOt1tg1gF
ಇದನ್ನೂ ಓದಿ:ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆ; ರೆಡ್​ ಅಲರ್ಟ್​ ಘೋಷಣೆ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಕೊತ್ವಾಲಿ ನಗರದ ಕಾಕನ್​ ಗ್ರಾಮದ ನಿವಾಸಿಯಾದ ದೀಪಾ ಅದೇ ಊರಿನಲ್ಲಿ ಮೊಬೈಲ್​ ಅಂಗಡಿ ನಡೆಸುತ್ತಿದ್ದ ವ್ಯಕ್ತಿಗೆ 80 ಸಾವಿರ ರೂಪಾಯಿ ಸಾಲ ಕೊಟ್ಟಿದ್ದರು. ಶನಿವಾರ ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದ್ದು, ಸಂತ್ರಸ್ತೆ ದೀಪಾ ತನ ಹಣವನ್ನು ಹಿಂತಿರುಗಿಸುವಂತೆ ಅಂಗಡಿಯವನಿಗೆ ತಾಕೀತು ಮಾಡಿದ್ದಾರೆ.
ಇದರಿಂದ ಕುಪಿತಗೊಂಡ ಆರೋಪಿಯು ಏಕಾಏಕಿ ಆಕೆಯ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಸಂತ್ರಸ್ತೆ ಜೋರಾಗಿ ಕೂಗಿಕೊಂಡಿದ್ದು, ಕೂಡಲೇ ಸ್ಥಳೀಯರು ಬೆಂಕಿ ನಂದಿಸಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ಧಾರೆ. ಘಟನೆ ಬಳಿಕ ಆರೋಪಿ ತಲೆಮಾರಿಸಿಕೊಂಡಿದ್ದು, ಆತನನ್ನು ಪತ್ತೆಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − three =
Remember me
