ಪುಣೆ:ಇತ್ತೀಚಿನ ದಿನಗಳಲ್ಲಿ ವಿಮಾನದಲ್ಲಿ ಚಿನ್ನ ಹಾಗೂ ಡ್ರಗ್ಸ್ ಕಳ್ಳ​ಸಾಗಾಣಿಕೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಕಸ್ಟಮ್ಸ್​ ಅಧಿಕಾರಿಗಳು ಎಷ್ಟೇ ಕಠಿಣ ಕ್ರಮ ಜರುಗಿಸಿದರೂ ಸಹ ಇಂತಹ ಘಟನೆಗಳು ಮರುಕಳಿಸುತ್ತಿವೆ.
ಇದೀಗ ಪ್ರಕರಣ ಒಂದರಲ್ಲಿ ಮಹಿಳೆಯೊಬ್ಬರು ತನ್ನ ಖಾಸಗಿ ಅಂಗದೊಳಗೆ 20 ಲಕ್ಷ ರೂ. ಮೌಲ್ಯದ ಚಿನ್ನ ಸಾಗಿಸುತಿದ್ದ ಘಟನೆ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇದನ್ನೂ ಓದಿ:ಹನಿಮೂನ್ ಪೀರಿಯಡ್​ನಲ್ಲೇ ಹೀಗಾದರೆ ಮುಂದಿನ ಕಥೆ ಏನು: ಎಚ್​.ಡಿ. ಕುಮಾರಸ್ವಾಮಿ
ದುಬೈನಿಂದ ಪುಣೆಗೆ ಬಂದಿಳಿದ 41 ವರ್ಷದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಓಡಾಡುತ್ತಿದ್ದುದ್ದನ್ನು ಕಸ್ಟಮ್ಸ್​ ಅಧಿಕಾರಿಗಳು ಮೊದಲಿಗೆ ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳ ತಂಡ ಮಹಿಳಾ ಸಿಬ್ಬಂದಿಯನ್ನು ಕರೆಸಿ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಖಾಸಗಿ ಅಂಗದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಕ್ಸ್​ರೇ ಮಾಡಿಸಿದಾಗ 20.30 ಲಕ್ಷ ರೂಪಾಯಿ ಮೌಲ್ಯದ 423.41 ಗ್ರಾಂ ಚಿನ್ನವನ್ನು ಕ್ಯಾಪ್ಯ್ಸೂಲ್​ ರೂಪದಲ್ಲಿ ತನ್ನ ಖಾಸಗಿ ಅಂಗದಲ್ಲಿ ಇರಿಸಿಕೊಂಡು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಮಹಿಳೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 + nineteen =
Remember me
