ನವದೆಹಲಿ:ತನ್ನನ್ನು ಅವಾಯ್ಡ್​ ಮಾಡಿದ್ದಳು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಪ್ರೇಯಸಿಗೆ ಅನೇಕ ಬಾರಿ ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನವದೆಹಲಿಯ ಲಾಡೋ ಸರಾಯ್ ಪ್ರದೇಶದಲ್ಲಿ ನಡೆದಿದೆ.
ಇರಿತಕ್ಕೊಳಗಾದ 23 ವರ್ಷದ ಮಹಿಳೆ ಸ್ಥಿತಿ ಗಂಭಿರವಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಗೌರವ್​ ಪಾಲ್ (27) ವಶಕ್ಕೆ ಪಡೆದಿರುವ ಪೊಲೀಸರು 307 (ಕೊಲೆ ಯತ್ನ) ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ದಕ್ಷಿಣ ವಿಭಾಗದ ಡಿಸಿಪಿ ಚಂದನ್ ಚೌಧರಿ, ಬಂಧಿತ ಆರೋಪಿ ಗೌರವ್ ತನ್ನ ಪ್ರೇಯಸಿ ತನ್ನನ್ನು ಅವಾಯ್ಡ್​ ಮಾಡುತ್ತಿದ್ದಳು ಎಂಬ ಕಾರಣಕ್ಕೆ ಆಕೆಯನ್ನು ಹೆದರಿಸಲು ಹೋಗಿ ಕೃತ್ಯ ಎಸಗಿದ್ದಾನೆ. ಮೊದಲಿಗೆ ಆಕೆಯನ್ನು ಭೇಟಿ ಮಾಡುವ ನೆಪದಲ್ಲಿ ಕರೆಸಿಕೊಂಡ ಆರೋಪಿ ಬಳಿಕ ಕ್ಯಾಬ್​ ಒಂದನ್ನು ಬುಕ್​ ಮಾಡಿ ಬೇರೆಡೆಗೆ ತೆರಳೋಣ ಎಂದು ಹೇಳಿದ್ದಾನೆ.
ಇದನ್ನೂ ಓದಿ:ಮಧ್ಯಪ್ರದೇಶ; ಬಿಜೆಪಿಯ 225 ತಿಂಗಳ ಆಡಳಿತದಲ್ಲಿ 250ಕ್ಕೂ ಹೆಚ್ಚು ಹಗರಣಗಳು ನಡೆದಿವೆ: ಪ್ರಿಯಾಂಕ ಗಾಂಧಿ
ಕಾರ್​ನಲ್ಲಿ ಕುಳಿತುಕೊಂಡ ಬಳಿಕ ಆರೋಪಿ ಯುವತಿಗೆ ಚಾಕುವಿನಿಂದ ಇರಿಯಲು ಶುರು ಮಾಡಿದ್ದು, ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಇದನ್ನು ಗಮನಿಸಿದ ಕ್ಯಾಬ್​ ಚಾಲಕ ಆತನನ್ನು ಸಾರ್ವಜನಿಕರ ಸಹಾಯದೊಂದಿಗೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾನೆ. ಅಕ್ಟೋಬರ್​ 10ರಂದು ಗಾಯಾಳು ಯುವತಿ ಬಂಧಿತ ಆರೋಪಿ ಪಾಲ್​ ತನಗೆ ಹಣಕಾಸಿನ ವಿಚಾರವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಕಂಟ್ರೋಲ್​ ರೂಮಿಗೆ ಕರೆ ಮಾಡಿ ದೂರು ದಾಖಲಿಸಿದ್ದಳು.
ಪ್ರಕರಣ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆತನ ವಿರುದ್ಧ ಭಾರತ ದಂಡ ಸಂಹಿತೆ 307 (ಕೊಲೆ ಯತ್ನ)ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಗಾಯಾಳು ಹೇಳಿಕೆ ಪಡೆದು ಚಾರ್ಜ್​ಶೀಟ್​ ಸಿದ್ದಪಡಿಸಿ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ದೆಹಲಿ ದಕ್ಷಿಣ ವಿಭಾಗದ ಡಿಸಿಪಿ ಚಂದನ್ ಚೌಧರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − four =
Remember me
