ದೆಹಲಿ:ಮಹಿಳೆಯ ದೇಹದ ಭಾಗಗಳನ್ನು ತುಂಡು.. ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ದೆಹಲಿಯ ಸರಾಯ್ ಕಾಲೆ ಖಾನ್‌ನಲ್ಲಿ ರಾಪಿಡ್ ಮೆಟ್ರೋ ನಿರ್ಮಾಣ ಸೈಟ್ ಬಳಿ ಎಸೆದಿರುವ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆಯ ಸುಮಾರಿಗೆ ರಾಪಿಡ್ ಮೆಟ್ರೋದ ನಿರ್ಮಾಣ ಹಂತದ ಪ್ರದೇಶದಲ್ಲಿ ದೇಹದ ಭಾಗಗಳ ಬಗ್ಗೆ ಸನ್ಲೈಟ್ ಕಾಲೋನಿ ಪೊಲೀಸ್ ಠಾಣೆಗೆ ಮಾಹಿತಿ ಲಭ್ಯವಾಗಿದೆ. ಮಹಿಳೆಯ ತಲೆಬುರುಡೆ, ಕೊಳೆತು ವಿರೂಪಗೊಂಡ ದೇಹದ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಡಿವೋರ್ಸ್ ಕೊಟ್ಟ ಪತಿ; ಮೀಸೆ, ಗಡ್ಡ ಬಿಟ್ಟು ಪುರುಷನಾದ ಮಹಿಳೆ!
ದೆಹಲಿ ಪೊಲೀಸ್ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಅಪರಾಧ ತಂಡವು ಸ್ಥಳವನ್ನು ಪರಿಶೀಲಿಸಿದೆ. ಪತ್ತೆಯಾದ ಭಾಗಗಳನ್ನು ಮುಂದಿನ ಕ್ರಮಕ್ಕಾಗಿ ಏಮ್ಸ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
ಇದನ್ನೂ ಓದಿ:ಡ್ರೈ ಕ್ಲೀನ್‌ಗೆ ಬಟ್ಟೆ ಕೊಡೋಕೆ ಹೋದ ಮದುಮಗಳು 6 ಮಕ್ಕಳ ತಂದೆ ಜತೆ ಎಸ್ಕೇಪ್!
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ಪತ್ತೆಯಾದ ಛಿದ್ರಗೊಂಡ ಮೃತದೇಹದ ಗುರುತು ಪತ್ತೆ ಹಚ್ಚಲು ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
VIDEO | ಸೂಪ್‌ನಲ್ಲಿ ದಂಪತಿಗೆ ಸಿಕ್ತು ಇಲಿ: ಕೋರ್ಟ್​​ ಮೆಟ್ಟಿಲೇರಿದ ಜೋಡಿಗೆ ಶಾಕ್​​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
