ರಾಂಚಿ:ಫಸಲಿಗೆ ಬಂದಿದ್ದ ಬೆಳೆಯನ್ನು ಹಂದಿಗಳು ನಾಶಪಡಿಸಿದ್ದಾವೆ ಎಂಬ ಆರೋಪದ ಮೇಲೆ ಗುಂಪೊಂದು ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಹೊಡೆದು ಕೊಲೆ ಮಾಡಿರುವ ಘಟನೆ ಜಾರ್ಖಂಡ್​​ ರಾಜಧಾನಿ ರಾಂಚಿಯ ಹೊರವಲಯದಲ್ಲಿ ನಡೆದಿದೆ.
ರಾಂಚಿ ನಗರದಿಂದ ಸುಮಾರು 25 ಕಿಲೋಮೀಟರ್ ದೂರವಿರುವ ಒರ್ಮಾಂಜಿ ಪೊಲೀಸ್ ಠಾಣೆ ವ್ಯಾಪ್ತಿಯ ಝಂಝಿ ತೋಲಾ ಎಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರನ್ನು ಜನೇಶ್ವರ್ ಬೇಡಿಯ (42), ಸರಿತಾ ದೇವಿ (39), ಸಂಜು ದೇವಿ (25) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ದೆಹಲಿ ಮೆಟ್ರೋ ರೈಲಿನಲ್ಲಿ ಅಪ್ರಾಪ್ತ ವಯಸ್ಕಳ ಎದುರೇ ಕಾಮುಕನಿಂದ ಹಸ್ತಮೈಥುನ
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ರಾಂಚಿ ಗ್ರಾಮಾಂತರ ಪೊಲೀಸ್​ ವರಿಷ್ಠಾಧಿಕಾರಿ ಹ್ಯಾರಿಸ್​ ಬಿನ್​ ಜಮಾನ್​ ಕೆಲವು ದಿನಗಳ ಹಿಂದೆ ಫಸಲಿಗೆ ಬಂದಿದ್ದ ಬೆಳೆಗಳನ್ನು ತಾವು ಸಾಕಿದ ಹಂದಿಗಳು ನಾಶಪಡಿಸಿವೆ ಎಂದು ಎರಡು ಕುಟುಂಬಗಳ ನಡುವೆ ಗಲಾಟೆಯಾಗಿತ್ತು. ಗುರುವಾರ ಬೆಳಗ್ಗೆ ಇದೇ ವಿಚಾರವಾಗಿ ಪುನಃ ಗಲಾಟೆಯಾಗಿದ್ದು, 10 ಮಂದಿ ಇದ್ದ ಗುಂಪೊಂದು ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಹೊಡೆದು ಕೊಲೆ ಮಾಡಿದೆ.
ಪ್ರಕರಣದ 10 ಆರೋಪಿಗಳು ತಲೆಮಾರಿಸಿಕೊಂಡಿದ್ದು, ಅವರನ್ನು ಪತ್ತೆ ಹಚ್ಚಲು ವಿಶೇಷ ತಂಡ ಒಂದನ್ನು ರಚಿಸಲಾಗಿದೆ. ಆರೋಪಿಗಳನ್ನು ಪ್ರತ್ಯಕ್ಷದರ್ಶಿಗಳು ಹಾಗೂ ಮೃತರ ಕುಟುಂಬಸ್ಥರು ಗುರುತು ಹಿಡಿದಿರುವುದರಿಂದ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ರಾಂಚಿ ಗ್ರಾಮಾಂತರ ಪೊಲೀಸ್​ ವರಿಷ್ಠಾಧಿಕಾರಿ ಹ್ಯಾರಿಸ್​ ಬಿನ್​ ಜಮಾನ್ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × three =
Remember me
