ಲಖನೌ:ತನಗೆ ಕೈಕೊಟ್ಟು ಬೇರೊಂದು ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಯುವಕನ ಮುಖಕ್ಕೆ ಆ್ಯಸಿಡ್​ ಎರಚಿ ಪ್ರೇಯಸಿ ಸೇಡು ತೀರಿಸಿಕೊಂಡಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆಯರಿಗೂ ಆ್ಯಸಿಡ್​ ತಗುಲಿ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂತ್ರಸ್ತನ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಮಹಿಳೆಯರು ಹಿಡಿದು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
बारात लेकर निकले दूल्हे पर प्रेमिका ने फेंका तेजाबप्रेमिका को पकड़ कर घर वालों ने की धुनाईमामला बलिया का है।pic.twitter.com/hz9NmtDqUe
ಇದನ್ನೂ ಓದಿ:ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಆಸ್ತಿ ಮರುಹಂಚಿಕೆ ಜಾರಿ; ನಾನು ಹಾಗೆ ಹೇಳಿಯೇ ಇಲ್ಲ ಎಂದು ಉಲ್ಟಾ ಹೊಡೆದ ರಾಹುಲ್​ ಗಾಂಧಿ
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಬಲ್ಲಿಯಾ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿ ಮುನ್ನಾ ಲಾಲ್​ ಯಾದವ್, ಸಂತ್ರಸ್ತ ತನಗೆ ಮೋಸ ಮಾಡಿ ಬೇರೊಬ್ಬಳ ಜೊತೆ ಮದುವೆ ಮಾಡಿಕೊಳ್ಳುತ್ತಿದ್ದಾನೆ ಎಂಬ ವಿಚಾರ ತಿಳಿದ ಯುವತಿ ಮಾರುವೇಷದಲ್ಲಿ ಬಂದು ಆತನ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ. ಯುವಕ ಹಾಗೂ ಯುವತಿ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದು, ಪರಸ್ಪರ ದೈಹಿಕ ಸಂಪರ್ಕವನ್ನು ಹೊಂದಿದ್ದರು ಎಂದು ತಿಳಿದುಬಂದಿದೆ. ಇಬ್ಬರ ಪ್ರೇಮಕ್ಕೆ ಎರಡು ಕಡೆಯ ಕುಟುಂಬಸ್ಥರು ವಿರೋಧಿಸಿದ ಕಾರಣ ಆತ ಈಕೆಯಿಂದ ಅಂತರ ಕಾಯ್ದುಕೊಂಡಿದ್ದ.
ಏಪ್ರಿಲ್​ 22ರಂದು ತನ್ನ ಪ್ರಿಯಕರನಿಗೆ ಮದುವೆ ನಿಶ್ಚಯಿಸಿರುವ ವಿಚಾರ ತಿಳಿದ ಯುವತಿ ಆತನ ಮುಖಕ್ಕೆ ಆ್ಯಸಿಡ್​ ಎರಚಿದ್ದಾಳೆ. ಸ್ಥಳದಲ್ಲಿದ್ದವರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯುವತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂತ್ರಸ್ತನ ತಾಯಿ ನೀಡಿದ ದೂರಿನ ಮೇರೆಗೆ ಭಾರತ ದಂಡ ಸಂಹಿತೆ (IPC Section) 326ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಬಲ್ಲಿಯಾ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿ ಮುನ್ನಾ ಲಾಲ್​ ಯಾದವ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − one =
Remember me
