ಹೈದರಾಬಾದ್‌:ಹೈದರಾಬಾದ್‌ನ ರ್ಯಾಲಿಯಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ವೇದಿಕೆಯ ಮೇಲೆ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪ್ರಧಾನಿ ನೋಡುವ ತವಕದಲ್ಲಿ ಯುವತಿಯೊಬ್ಬಳು ಲೈಟ್​ ಟವರ್​ ಏರಿದ ದೃಶ್ಯವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಬಿಜೆಪಿ ಕಥೆ ಮುಗಿದುಹೋದ ಅಧ್ಯಾಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
ರ್ಯಾಲಿಯಲ್ಲಿ ಭಾಗಿಯಾದ ಬಳಿಕ ವೇದಿಕೆಗೆ ಬಂದ ಪ್ರಧಾನಿ ಮೋದಿ, ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ಸಮಯದಲ್ಲಿ ಪ್ರಧಾನಿ ಅವರ ಗಮನವನ್ನು ಸೆಳೆಯಲು ಮುಂದಾದ ಯುವತಿಯೊಬ್ಬಳು ಅಲ್ಲೇ ಇದ್ದ ಲೈಟ್​ ಟವರ್​ನ ಏರಿ ಮೋದಿ ಅವರನ್ನು ಕೈಬೀಸಿ ಕರೆದಿದ್ದಾಳೆ.
#WATCH| Secunderabad, Telangana: During PM Modi's speech at public rally, a woman climbs a light tower to speak to him, and he requests her to come down.pic.twitter.com/IlsTOBvSqA
— ANI (@ANI)November 11, 2023

ಪ್ರಧಾನಿ ಗಮನವನ್ನು ತನ್ನತ್ತ ಸೆಳೆಯುವ ಪ್ರಯತ್ನದಲ್ಲಿ ಯುವತಿ ಮುನ್ನೆಚ್ಚರಿಕೆ ವಹಿಸದೆ ಟವರ್​ ಮೇಲಿರುವುದನ್ನು ಗಮನಿಸಿದ ಮೋದಿ, ಕೂಡಲೇ ಯುವತಿಯತ್ತ ನೋಡಿ, “ಬೇಟಾ ದಯವಿಟ್ಟು ಕೆಳಗೆ ಇಳಿಯಿರಿ. ಇದು ಸರಿಯಿಲ್ಲ, ನಾವು ನಿಮ್ಮೊಂದಿಗಿದ್ದೇವೆ. ನಿಮ್ಮ ಮಾತು ಕೇಳುತ್ತೇನೆ. ಈ ರೀತಿ ಮಾಡುವುದರಿಂದ ನಿಮಗೆ ಪ್ರಯೋಜನವಿಲ್ಲ, ನಾನು ನಿಮಗಾಗಿ ಇಲ್ಲಿಗೆ ಬಂದಿದ್ದೇನೆ” ಎಂದು ಮನವಿ ಮಾಡಿದರು.
ಇದನ್ನೂ ಓದಿ:ಇನ್ಮುಂದೆ ಮೆಗ್ಗಾನ್‌ನಲ್ಲಿ ಔಷಧ ಹೊರಗೆ ಬರೆಯವಂತಿಲ್ಲ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್
ಯುವತಿ ಲೈಟ್​ ಟವರ್​ ಏರಿದ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ,(ಏಜೆನ್ಸೀಸ್).
18 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ!; ಐವರ ಬಂಧನ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:ten + two =
Remember me
