ಲಖನೌ:ಅಪ್ಪ ಮಗನ ಜೋಡಿಯೊಂದು ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯ ಮೇಲೆ ಗ್ಯಾಂಗ್​ ರೇಪ್​ ನಡೆಸಿದ್ದು, ಆ ಮಹಿಳೆಗೆ ಬೆಂಕಿ ಹಚ್ಚಿ ಕೊಲ್ಲುವ ಪ್ರಯತ್ನ ಮಾಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ.
ಸೀತಾಪುರ ಜಿಲ್ಲೆಯ ಮಿಶ್ರಿಕ್​ ಪ್ರದೇಶದಲ್ಲಿ ಮಹಿಳೆಯೊಬ್ಬಳು ಗುರುವಾರದಂದು ತನ್ನ ಮನೆಯಿಂದ ನಗರದ ಕಡೆ ತಳ್ಳು ಗಾಡಿಯಲ್ಲಿ ಪ್ರಯಾಣಿಸುತ್ತಿದ್ದಳು. ಈ ಸಮಯದಲ್ಲಿ ಅಲ್ಲಿಗೆ ಬಂದ ಅಪ್ಪ ಮಗ ಮಹಿಳೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅದಾದ ಮೇಲೆ ಆಕೆಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ.
ಬೆಂಕಿಯಲ್ಲಿ ಬೇಯುತ್ತಿದ್ದ ಮಹಿಳೆಯನ್ನು ಸ್ಥಳೀಯರು ನೋಡಿದ್ದು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಚಾರವಾಗಿ ಪೊಲೀಸ್​ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಹುಡುಕಿ ವಶಕ್ಕೆ ಪಡೆದಿದ್ದಾರೆ. ಮಹಿಳೆಯ ದೇಹ ಶೇ. 30 ಭಾಗ ಸುಟ್ಟಿದ್ದು ಆಕೆ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿಸಲಾಗಿದೆ. ಸದ್ಯ ಆಕೆ ಸೀತಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಪಿಸ್ತೂಲು ಹೇಗೆ ವರ್ಕ್​ ಆಗುತ್ತದೆಯೆಂದು ನೋಡಲು ಸೋದರಳಿಯನಿಗೇ ಗುಂಡಿಟ್ಟ ಮಾವ! ವಿಡಿಯೋ ವೈರಲ್​

ಕೋಳಿಪಡೆ ಆಡಲು ಬಂದವನನ್ನು ಕೊಂದು ಪೊಲೀಸ್​ ಠಾಣೆ ಸೇರಿದ ಕೋಳಿ!

ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ! ಚಿನ್ನಾಭರಣ ಪ್ರಿಯರು ಫುಲ್​ ಖುಷ್​!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − 13 =
Remember me
