ಭೋಪಾಲ್​:ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. ಈ ಘಟನೆ ಮಧ್ಯಪ್ರದೇಶದ ದಾಮೋಹ್​ನಲ್ಲಿ ನಡೆದಿದೆ.
ಕೆಡವಲಾದ ಮನೆಯು ಕೌಶಲ್ ಕೆ. ಚೌಬೆ ಎಂಬ ವ್ಯಕ್ತಿಗೆ ಸೇರಿದ್ದಾಗಿದೆ. ಆರೋಪಿ ಚೌಬೆ, ದಾಮೋಹ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಒಬ್ಬರು. ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ರಾಜಕೀಯ ಮೇಲಾಟ, ರೈತರಿಗೆ ಸಂಕಟ- ಶಾಸಕ, ಅಧಿಕಾರಿ ವಿರುದ್ಧ ಆಕ್ರೋಶ
ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಇತರ ಮೂವರು ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಶುಕ್ರವಾರ (ಮಾ.10) ಕಿಶೋರ್‌ನನ್ನು ಬಂಧಿಸಲಾಗಿದೆ.
ಅಪರಾಧ ಕೃತ್ಯಗಳಲ್ಲಿ ತೊಡಗುವವರಲ್ಲಿ ಭಯ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಪ್ರಶಿತಾ ಕುರ್ಮಿ ತಿಳಿಸಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿಗಳು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆದು ಬುಲ್ಡೋಜರ್ ಬಳಸಿ ಆರೋಪಿಯ ಮನೆ ಕೆಡವಿದ್ದಾರೆ. ಪ್ರಶಿತಾ ನೇತೃತ್ವದಲ್ಲಿ ತೆರವು ಪ್ರಕ್ರಿಯೆ ಪೂರ್ಣಗೊಂಡಿದೆ.(ಏಜೆನ್ಸೀಸ್​)
ಪ್ರತಿ ಮನೆ ಮಗಳಾಗಲಿ ಒಲಿಂಪಿಕ್ಸ್ ತಾರೆ

ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಮಂಡಳಿ: ಬಡ ರೈತ ಮಹಿಳೆಯರಿಗೆ ಮಾಸಿಕ 1 ಸಾವಿರ ರೂ.: ಸಿಎಂ ಘೋಷಣೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನರೇಶ್-ಪವಿತ್ರಾ! ರಮ್ಯಾ ಸಂಬಂಧಕ್ಕೆ ಫುಲ್​ಸ್ಟಾಪ್ ಇಟ್ಟು ಹೊಸ ಜೀವನ ಆರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 17 =
Remember me
