ನವದೆಹಲಿ:ತಾಜ್​​ಮಹಲ್‌ ವೀಕ್ಷಿಸಲು ಬಂದಿದ್ದ ಮಹಿಳಾ ಪ್ರವಾಸಿ ಕಾಲು ಜಾರಿಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಿರುವ ಘಟನೆ ನವದೆಹಲಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಚಂದ್ರಯಾನದ ಗುಂಗಲ್ಲಿ ಬೆಂಗಳೂರು ಪೊಲೀಸರು; ವಿಶೇಷ ರೀತಿಯ ಜಾಗೃತಿ, ಅದಲ್ಲ.. ಇದು..!
ಗಾಯಾಳು ಮಹಿಳೆಯನ್ನು ಮನೋರಮಾ ದೇವಿ ಎಂದು ಗುರುತಿಸಲಾಗಿದ್ದು, ತನ್ನ ಪತಿ ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ದೆಹಲಿಯ ಆಗ್ರಾದಲ್ಲಿರುವ ತಾಜ್​​ಮಹಲ್‌ ವೀಕ್ಷಿಸಲು ಬಂದಿದ್ದರು. ಈ ವೇಳೆ ರಾಯಲ್ ಗೇಟ್ ಮುಂದೆ ಫೋಟೋ ಮತ್ತು ವೀಡಿಯೊಗಳನ್ನು ತೆಗೆದುಕೊಂಡಿದ್ದಾರೆ. ತದನಂತರ ಕೆಳಗೆ ಇಳಿಯಲು ಹೆಜ್ಜೆಯಿಟ್ಟಾಗ ಕಾಲು ಜಾರಿ ಬಿದ್ದಿದ್ದಾರೆ. ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ಸುತ್ತಮುತ್ತಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ತಕ್ಷಣ ಸಹಾಯಕ್ಕೆ ಧಾವಿಸಿ ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ.
ತಾಜ್​​ಮಹಲ್ ಮುಂದೆ ಹಾಜರಿದ್ದ ಕೆಲವು ಛಾಯಾಗ್ರಾಹಕರು ಘಟನೆಗೆ ಪ್ರತಿಕ್ರಿಯೆ ನೀಡಿದ್ದು, ರಾಯಲ್ ಗೇಟ್ ವೇದಿಕೆಯ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸವೆತ ಮತ್ತು ಶೀತದ ಕಾರಣ ನೆಲ ಜಾರುತ್ತಿದೆ. ಇದರಿಂದ ಪ್ರವಾಸಿಗರು ಆಗಾಗ್ಗೆ ಜಾರಿ ಬೀಳುತ್ತಿದ್ದಾರೆ. ಈ ಸಮಸ್ಯೆ ಬಗೆಹರಿಸಲು ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ,(ಏಜೆನ್ಸೀಸ್).
ಸಹೋದರನ ‘ಬೇಬಿ’ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಟ ವಿಜಯ್ ದೇವರಕೊಂಡ; ಸಿನಿಮಾಗೆ ಫ್ಯಾನ್ಸ್​​ ಬೆಂಬಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + seventeen =
Remember me
