ನವದೆಹಲಿ:ಸೆಪ್ಟೆಂಬರ್​ 18-22ರವರೆಗೆ ನಡೆದ ಸಂಸತ್​ನ ವಿಶೇಷ ಅಧಿವೇಶನದಲ್ಲಿ ಸುದೀರ್ಘ ಚರ್ಚೆಯ ಬಳಿಕ ಅನುಮೋದನೆಗೊಂಡಿದ್ದ‌ ಮಹಿಳಾ‌ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ಈ ಸಂಬಂಧ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಒಂದನ್ನು ಹೊರಡಿಸಿದ್ದು, ರಾಷ್ಟ್ರಪತಿಗಳು ಗುರುವಾರವೇ ಮಸೂದೆಗೆ ಅಂಕಿತ ಹಾಕಿರುವುದಾಗಿ ತಿಳಿಸಿದೆ. ಈಗ ಅಧಿಕೃತವಾಗಿ ಮಸೂದೆಯನ್ನು ಸಂವಿಧಾನ (106ನೇ ತಿದ್ದುಪಡಿ) ಕಾಯ್ದೆ ಎಂದು ಕರೆಯಲಾಗುತ್ತದೆ.
ಮಸೂದೆಗೆ ಕಾನೂನು ರೂಪ ಸಿಕ್ಕಿದ್ದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಹಿಳೆಯರಿಗೆ 33% ರಾಜಕೀಯ ಮೀಸಲಾತಿ ನೀಡಲಿದೆ. ಮುಂದಿನ ಜಾತಿಗಣತಿ‌ ಬಳಿಕ ಕ್ಷೇತ್ರ ಪುನರ್ ವಿಂಗಡಣೆಯಾಗಲಿದ್ದು, ಆ ಬಳಿಕವಷ್ಟೆ ಈ ಕಾನೂನು ಜಾರಿಗೆ ಬರಲಿದೆ ಎಂದು ಕಾನೂನು ಸಚಿವಾಲಯದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
