ನವದೆಹಲಿ:ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಮಸೂದೆ ಪರ 454 ಸಂಸದರು ಮತ ಚಲಾಯಿಸಿದ್ದಾರೆ. ಇಬ್ಬರೂ ಸಂಸದರು ಮಸೂದೆಗೆ ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಈ ಮೂಲಕ ನೂತನ ಸಂಸತ್​ ಭವನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.
ನಾರಿಶಕ್ತಿ ಅಧಿನಿಯಂ ಎಂಬ ಮಸೂದೆಯನ್ನು ಲೋಕಸಭೆಯಲ್ಲಿ ಸರ್ಕಾರ ಮಂಗಳವಾರ ಮಂಡಿಸಿತ್ತು. ನೂತನ ಸಂಸತ್​ ಭವನದಲ್ಲಿ ಮಂಡಿಸಲಾದ ಮೊದಲ ಮಸೂದೆ ಇದಾಗಿದೆ. ಮಹಿಳೆಯರಿಗೆ ಲೋಕಸಭೆ, ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್​ ಸಿಂಗ್​ ಮೇಘವಾಲ್​​ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ್ದರು.
ಈ ಮಸೂದೆಯು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನೀತಿ ನಿರೂಪಣೆಯಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುತ್ತದೆ. 2047ರ ವೇಳೆಗೆ ದೇಶವನ್ನು ಅಭಿವೃದ್ದಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.
Lok Sabha passes Women's Reservation Bill granting 33% seats to women in Lok Sabha and state legislative assemblies454 MPs vote in favour of the bill, 2 MPs vote against itpic.twitter.com/NTJz449MRX
ಇದನ್ನೂ ಓದಿ:ಚೈತ್ರಾ ಕುಂದಾಪುರ ಪ್ರಕರಣ; ನಗರ ಪೊಲೀಸ್​ ಆಯುಕ್ತರ ಕಚೇರಿ ಎದುರು ಸಾಲುಮರದ ತಿಮ್ಮಕ್ಕ ಪ್ರತಿಭಟನೆ
ಮಹಿಳಾ ಮೀಸಲಾತಿ ಮಸೂದೆಗೆ ಆಡಳಿತ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್​, ಎಸ್​ಪಿ, ಬಿಎಸ್​ಪಿ, ಡಿಎಂಕೆ, ಎನ್​ಸಿಪಿ ಸೇರಿದಂತೆ ಬಹುತೇಕ ಪಕ್ಷಗಳು ಕಾಯ್ದೆಗೆ ಬೆಂಬಲ ಸೂಚಿಸಿವೆ. ಆದರೆ, ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡುವ ಮೊದಲು ಜನಗಣತಿ, ಡಿಲಿಮಿಟೇಷನ್​ ಅಗತ್ಯತೆಯನ್ನು ಹಲವು ವಿಪಕ್ಷಗಳ ನಾಯಕರು ಪ್ರಶ್ನಿಸಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗೆ ಎಐಎಂಐಎಂ ಸಂಸದ ಅಸಾದುದ್ದೀನ್​ ಓವೈಸಿ ವಿರೋದಿಸಿದ್ದು, ಇದು ಸವರ್ಣೀಯ ಮಹಿಳೆಯರಿಗೆ ಅವಕಾಶ ನೀಡುತ್ತದೆ ಎಂದು ಆಕ್ಷೇಪಿಸಿದ್ದಾರೆ. ಈ ಸರ್ಕಾರ ಸವರ್ಣಿಯ ಮಹಿಳೆಯರಿಗೆ ಹೆಚ್ಚಿನ ಅವಕಾಶವನ್ನು ನೀಡಲು ಬಯಸಿದ್ದು, ಮುಸ್ಲಿಂ ಹಾಗೂ ಒಬಿಸಿ ಮಹಿಳೆಯರಿಗೆ ಹೆಚ್ಚು ಅವಕಾಶ ನೀಡದಿರಲು ನಿರ್ಧರಿಸಿದಂತೆ ಕಾಣುತ್ತಿದೆ.
ಲೋಕಸಭೆಗೆ ಈವರೆಗೂ 690 ಮಹಿಳಾ ಸಂಸದರು ಆಯ್ಕೆಯಾಗಿದ್ದು, ಅದರಲ್ಲಿ 25ಮಂದಿ ಮಾತ್ರ ಮಸ್ಲಿಂ ಸಮುದಾಯದವರಾಗಿದ್ದಾರೆ. ನಾನೂ ಈ ಕಾನೂನನ್ನು ವಿರೋಧಿಸುತ್ತೇನೆ. ಮಸೂದೆ ಜಾರಿ ಮಾಡಲು ನೀಡುತ್ತಿರುವ ಸಮರ್ಥನೆ ಏನೆಂದರೆ ಹೆಚ್ಚಿನ ಮಹಿಳೆಯರು ಸಂಸತ್ತಿಗೆ ಆಯ್ಕೆಯಾಗಿ ಬರುತ್ತಾರೆಂದು. ಆದರೆ, ಈ ಪ್ರಾತಿನಿಧ್ಯವನ್ನು ಒಬಿಸಿ ಹಾಗೂ ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಯಾಕೆ ನೀಡಲಾಗುತ್ತಿಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್​ ಓವೈಸಿ ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
