ಮುಂಬೈ: ಮಹಾರಾಷ್ಟ್ರದಲ್ಲಿ ಕರೊನಾವೈರಸ್ ಹಾವಳಿ ಮತ್ತೆ ಹೆಚ್ಚಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಅಲ್ಲಿನ ಸರ್ಕಾರ ಅಮರಾವತಿ ಮತ್ತು ಯಾವತ್ಮಲ್ ಜಿಲ್ಲೆಯಲ್ಲಿ ಲಾಕ್​ಡೌನ್ ಜಾರಿಗೊಳಿಸಿದೆ. ಆ ಜಿಲ್ಲೆಗಳಲ್ಲಿ ಪ್ರತಿದಿನ ಏಳು ಸಾವಿರಕ್ಕೂ ಹೆಚ್ಚು ಕೊರೊನಾಸೋಂಕು ಪ್ರಕರಣಗಳು ಕಂಡು ಬರುತ್ತಿವೆ.
ಇನ್ನೊಂದೆಡೆ ಮುಂಬೈನಲ್ಲೂ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಜನರಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೇ ಮತ್ತೆ ಲಾಕ್​ಡೌನ್ ಜಾರಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಮಹಾ ಸರ್ಕಾರ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅಲ್ಲಿನ ಕೆಳ ಹಂತದ ಪೊಲೀಸರಿಗೆ ವರ್ಕ್​ ಫ್ರಮ್ ಹೋಮ್ ಗೆ ಅವಕಾಶ ನೀಡಿ ಅಚ್ಚರಿ ಮೂಡಿಸಿದೆ.ಈ ಕುರಿತು ಆದೇಶ ಹೊರಡಿಸಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಎ ಮತ್ತು ಬಿ ಶ್ರೇಣಿಯ ಅಧಿಕಾರಿಗಳಿಗೆ ಹಾಜರಾತಿ ಕಡ್ಡಾಯ ಇರುತ್ತದೆ. ಸಿ ಮತ್ತು ಡಿ ವೃಂದದ ಸಿಬ್ಬಂದಿಯಲ್ಲಿ ಶೇ 25 ರಷ್ಟು ಮಾತ್ರ ಬೆಳಿಗ್ಗೆ 9 ರಿಂದ ಸಂಜೆ ರವರೆಗೆ ಹಾಗೂ ಇನ್ನುಳಿದ ಶೇ 25 ರಷ್ಟು ಕಚೇರಿ ಸಿಬ್ಬಂದಿಗೆ ವರ್ಕ್​ ಫ್ರಮ್​ ಹೋಮ್ ಅವಕಾಶ ಇರುತ್ತದೆ. ಕರೊನಾ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆದೇಶ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಮಂಗಳವಾರ 6218 ಹೊಸ ಕರೊನಾ ಸೋಂಕು ಪತ್ತೆ ಪ್ರಕರಣಗಳು ವರದಿಯಾಗಿವೆ. 61 ಜನ ಮೃತಪಟ್ಟಿದ್ದಾರೆ. ಇದುವರೆಗೆ ಆ ರಾಜ್ಯದಲ್ಲಿ 21,12,312 ಜನರಿಗೆ ಸೋಂಕು ತಗುಲಿತ್ತು. ಇದರಲ್ಲಿ 53409 ಸಕ್ರಿಯ ಪ್ರಕರಣಗಳು ವರದಿಯಾಗಿವೆ. (ಏಜೇನ್ಸಿಸ್)
VIDEO| ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಪತ್ನಿಗೆ ಕುದಿಯುವ ಎಣ್ಣೆ ಪರೀಕ್ಷೆ: ಶೀಲ ಸಾಬೀತಿಗೆ ಗಂಡನ ತಾಕೀತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
