ಬೆಂಗಳೂರು:ರಾಜ್ಯದಲ್ಲಿ ಹೆಚ್ಚು ಹೆಚ್ಚು ಪೊಲೀಸ್​ ಸಿಬ್ಬಂದಿ ಕೋವಿಡ್​ಗೆ ಒಳಗಾಗುತ್ತಿರುವುದರಿಂದ ಠಾಣೆಗಳಲ್ಲಿ ಅಗತ್ಯವಿರುವ ಸಿಬ್ಬಂದಿಯನ್ನಷ್ಟೇ ನಿಯೋಜಿಸಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಜತೆಗೆ, 50ಕ್ಕೂ ಹೆಚ್ಚು ವಯಸ್ಸಾದ ಸಿಬ್ಬಂದಿಯನ್ನು ಮನೆಯಿಂದಲೇ ಕೆಲಸ ಮಾಡಲು ಸೂಚನೆ ನೀಡಬೇಕು. ಕಾನ್​ಸ್ಟೆಬಲ್​ಗಳನ್ನು ಪಾಳಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ;ಲಾಕ್​ಡೌನ್​ನಿಂದ ಕೈಗಾರಿಕೆಗಳಿಗೆ ವಿನಾಯ್ತಿ ನೀಡಿ; ಇಲ್ಲದಿದ್ದರೆ ಮತ್ತೆ ಸಂಕಷ್ಟ; ಸಿಎಂಗೆ ಮನವಿ
ಕೋವಿಡ್​ ಕಾಯಿಲೆ ಬಂದ ಪೊಲೀಸರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಅನುವಾಗುವಂತೆ ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಹಣ ಬಿಡುಗಡೆ ಮಾಡಬೇಕು. ಸಾರ್ವಜನಿಕ ಸ್ಥಳಗಳು, ಕೋವಿಡ್​ ಆಸ್ಪತ್ರೆ, ಸ್ಮಶಾನ ಮೊದಲಾದ ಸೋಂಕಿನ ಅಪಾಯವಿರುವ ಸ್ಥಳಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಪಿಪಿಇ ಕಿಟ್​ ನೀಡಬೇಕು ಎಂದು ಹೇಳಿದ್ದಾರೆ.
ಠಾಣೆಗಳಲ್ಲಿ ಗಾಜಿನ ಕ್ಯಾಬಿನ್​ ಅಳವಡಿಸಿ ದೂರು ಸ್ವೀಕರಿಸಲು ಕ್ರಮಕೈಗೊಳ್ಳಬೇಕು. ಸಿಬ್ಬಂದಿಗೆ ಆಯುಷ್​ ಹಾಗೂ ಇತರ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ನೀಡಬೇಕೆಂದು ಹೇಳಿದ್ದಾರೆ.
ಸೋಮವಾರದಿಂದ ದೇಶದ 12 ಕಡೆಗಳಲ್ಲಿ ಕೋವಿಡ್​ ರೋಗಿಗಳಿಗೆ ದೇಶೀಯ ಕರೊನಾ ಲಸಿಕೆ ಪ್ರಯೋಗ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten − two =
Remember me
