ನವದೆಹಲಿ:ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜಗತ್​ ಪ್ರಕಾಶ್​ ನಡ್ಡಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇದೇ 20 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ನಡ್ಡಾ ಅವರ ಪದಾರೋಹಣ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲು ಬಿಜೆಪಿ ನಿರ್ಧರಿಸಿದೆ. ಜೆ.ಪಿ. ನಡ್ಡಾ ಅವರು 2019 ಜೂನ್​ ನಿಂದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ, ಕೇಂದ್ರ ಸಚಿವರು, ಮುಖಂಡರು ಮತ್ತು ಬಿಜೆಪಿಯ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಮುನ್ನ ಈ ಕಾರ್ಯಕ್ರಮ ನಡೆಯಲಿರುವುದು ಬಿಜೆಪಿಗೆ ಬಲ ತರಲಿದೆ ಎನ್ನಲಾಗಿದೆ. 70 ಕ್ಷೇತ್ರವುಳ್ಳ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 8ರಂದು ನಡೆಯಲಿದ್ದು, ಫೆ.11ಕ್ಕೆ ಫಲಿತಾಂಶ ಹೊರಬೀಳಲಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + one =
Remember me
