ಶ್ರೀನಗರ:10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರಲ್ಲಿ ಆಚರಿಸಿದ್ದಾರೆ. ಕಾಶ್ಮೀರದ ‘ಶೇರ್‌ ಇ ಕಾಶ್ಮೀರ್ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌’ನಲ್ಲಿ (ಎಸ್‌ಕೆಐಸಿಸಿ) 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮೂರನೇ ಅವಧಿಗೆ ಪ್ರಧಾನಿಯಾದ ಬಳಿಕ ಮೊದಲ ಸಲ ಕಾಶ್ಮೀರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ್ದಾರೆ. ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಿಳೆಯರೊಂದಿಗೆ ಸ್ವತಃ ಸೆಲ್ಫಿ ಕ್ಲಿಕ್ಕಿಸುವ ಮೂಲಕ ನೆರದಿದ್ದವರ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.
As we mark the 10th International Day of Yoga, I urge everyone to make it a part of their daily lives. Yoga fosters strength, good health and wellness. Wonderful to join this year's programme in Srinagar.https://t.co/oYonWze6QU
ಇದನ್ನೂ ಓದಿ:ಅಫ್ಘನ್​ ವಿರುದ್ಧ 47 ರನ್​ಗಳ ಜಯ; ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮಾ ಹೇಳಿದ್ದಿಷ್ಟು
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ಜನರು ತಮ್ಮ ವೈಯಕ್ತಿಕ ಯೋಗಕ್ಷೇಮಕ್ಕೂ ಸಮಾಜದ ಕಲ್ಯಾಣಕ್ಕೂ ಸಂಬಂಧವಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಯೋಗ ನೆರವಾಗಿದೆ. ಜಗತ್ತು ಯೋಗವನ್ನು ಜಾಗತಿಕ ಕ್ಷೇಮದ ಪ್ರಬಲ ರಾಯಭಾರಿ ಎಂಬಂತೆ ನೋಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾವು ಒಳಗಿಂದ ಶಾಂತವಾಗಿದ್ದಾಗ, ಜಗತ್ತಿನ ಮೇಲೂ ಧನಾತ್ಮಕ ಪರಿಣಾಮವನ್ನು ಉಂಟುಮಾಡಬಲ್ಲೆವು. ಸಮಾಜದಲ್ಲಿ ಧನಾತ್ಮಕ ಬದಲಾವಣೆಯ ಹೊಸ ಮಾರ್ಗಗಳನ್ನು ಯೋಗ ಪರಿಚಯಿಸಿದೆ. ಜಗತ್ತಿನಾದ್ಯಂತ ಯೋಗ ಅಭ್ಯಾಸ ಮಾಡುತ್ತಿರುವ ಜನರು ನಿರಂತರವಾಗಿ ಅಭಿವೃದ್ಧಿ ಸಾಧಿಸುತ್ತಿದ್ದಾರೆ. ನಾನು ಎಲ್ಲಿಗೇ (ವಿದೇಶಗಳಿಗೆ) ಹೋದರೂ, ಯೋಗದ ಪ್ರಯೋಜನಗಳ ಬಗ್ಗೆ ಮಾತನಾಡದ ವಿಶ್ವನಾಯಕರನ್ನು ಕಾಣಲಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Post Yoga selfies in Srinagar! Unparalled vibrancy here, at the Dal Lake.pic.twitter.com/G9yxoLUkpX
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:4 × 5 =
Remember me
