ಮಾಸ್ಕೋ:ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಹಠಾತ್ ಹೃದಯಾಘಾತವಾಗಿದ್ದು,  ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ನಂತರ ಅವರ ಸ್ಥಿತಿ ಸ್ವಲ್ಪ ಸುಧಾರಿಸಿದೆ.
ಟೆಲಿಗ್ರಾಮ್ ಚಾನೆಲ್ ಜನರಲ್ ಎಸ್‌ವಿಆರ್, ರಷ್ಯಾದ ಅಧ್ಯಕ್ಷರ ಆರೋಗ್ಯದ ಬಗ್ಗೆ ಕಾಮೆಂಟ್ ಮಾಡಿದ್ದು, ಪುಟಿನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಹೇಳಿದೆ.
ರಾತ್ರಿ 9 ಗಂಟೆಗೆ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಅಧಿಕಾರಿಗಳು ಅಧ್ಯಕ್ಷರ ಕೊಠಡಿಯಿಂದ ಜೋರು ಶಬ್ದವನ್ನು ಕೇಳಿದರು ಎಂದು ಜನರಲ್ ಎಸ್‌ವಿಆರ್ ತಿಳಿಸಿದೆ.
ವರದಿಯಲ್ಲಿ ಇಬ್ಬರು ಭದ್ರತಾ ಅಧಿಕಾರಿಗಳು ತಕ್ಷಣವೇ ಅಧ್ಯಕ್ಷರ ಮಲಗುವ ಕೋಣೆಗೆ ಧಾವಿಸಿ, ಪುಟಿನ್ ಹಾಸಿಗೆಯ ಪಕ್ಕದಲ್ಲಿ ನೆಲದ ಮೇಲೆ ಮಲಗಿದ್ದನ್ನು ನೋಡಿದ್ದಾರೆ. ಪಕ್ಕದ ಟೇಬಲ್ ಕೂಡ ಉರುಳಿತ್ತು. ಅಧ್ಯಕ್ಷರು ಬಿದ್ದಾಗ ಅವರು ಟೇಬಲ್ ಅನ್ನು ಹಿಡಿಯಲು ಪ್ರಯತ್ನಿಸಿರಬಹುದು ಎಂದು ಭಾವಿಸಲಾಗಿದೆ.
ಪಾತ್ರೆಗಳು ಇದರಿಂದಾಗಿ ಜೋರಾಗಿ ಸದ್ದು ಮಾಡಿವೆ. ಪುಟಿನ್ ಅವರು ನೆಲದ ಮೇಲೆ ಮಲಗಿರುವಾಗ ಕಣ್ಣುಗಳನ್ನು ಹಿಂದಕ್ಕೆ ತಿರುಗಿಸಿದರು. ತಕ್ಷಣ ನಿವಾಸದಲ್ಲಿ ಮತ್ತು ಪಕ್ಕದ ಕೋಣೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರನ್ನು ಕರೆಸಲಾಯಿತು ಎಂದು ತಿಳಿಸಲಾಗಿದೆ.
ರಷ್ಯಾದ ಅಧ್ಯಕ್ಷರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪುಟಿನ್ ಅವರ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಊಹಾಪೋಹಗಳ ನಡುವೆ ಈ ವರದಿ ಬಂದಿದೆ. ಜನರಲ್ ಎಸ್​​ವಿಆರ್​​ ಅನ್ನು ರಷ್ಯಾದ ಮಾಜಿ ಲೆಫ್ಟಿನೆಂಟ್ ಜನರಲ್ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬಿಕ್ಕಟ್ಟು: ಇಂಧನ ಕೊರತೆಯಿಂದ ದಿವಾಳಿಯ ಅಂಚಿನಲ್ಲಿರುವ ಪಾಕಿಸ್ತಾನ ಏರ್‌ಲೈನ್ಸ್, 26 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 5 =
Remember me
